ಬೆಳಗಾವಿ: ಕೇವಲ 300 ಜನಸಂಖ್ಯೆ ಹೊಂದಿರುವ ಪುಟ್ಟ ಹಳ್ಳಿಯೊಂದರಲ್ಲೇ ಮಹಾಮಾರಿ ಕೊರೊನಾ ಮಹಾ ಸ್ಫೋಟಗೊಂಡಿದೆ. ಒಂದೇ ಗ್ರಾಮದ 145 ಜನರಿಗೆ ಡೆಡ್ಲಿ ಕೊರೊನಾ ವೈರಸ್ ವಕ್ಕರಿಸಿದೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಬನಾಳಿ ಗ್ರಾಮದ 145 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಲವರಿಗೆ ಜ್ವರ, ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಅಶೋಕ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರ‍್ಯಾಂಡಮ್ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆ ವೇಳೆ 145 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಅಬನಾಳಿ ಗ್ರಾಮದ ಅರ್ಧಕ್ಕೂ ಅಧಿಕ ಜನರಿಗೆ ಕೊರೊನಾ ವಕ್ಕರಿಸಿದ್ದು, ಗ್ರಾಮದವರು ಸೇರಿ ನೆರೆಯ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಮಹಾರಾಷ್ಟ್ರ, ಗೋವಾಗೆ ಹೋಗಿದ್ದ ವಲಸೆ ಕಾರ್ಮಿಕರು ಸ್ವಗ್ರಾಮಕ್ಕೆ ವಾಪಸ್ ಬಂದಿದ್ದರಿಂದ ಸೋಂಕು ಹರಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಜಿಲ್ಲಾಡಳಿತ ಸೋಂಕಿತರ ಟ್ರಾವೆಲ್ ಹಿಸ್ಟರಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಸೋಂಕಿತರೆಲ್ಲರಿಗೂ ಸದ್ಯ ಹೋಮ್ ಕ್ವಾರಂಟೈನ್ನಲ್ಲಿ ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಇದನ್ನೂ ಓದಿ: ಕೊರೊನಾ ಸೋಂಕಿತನ ಅಂತ್ಯಸಂಸ್ಕಾರ ನೆರವೇರಿಸಿದ ಮಂಡ್ಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ
ಇಡೀ ಗ್ರಾಮವನ್ನೇ ಕಂಟೈನ್‌ಮೆಂಟ್ ಝೋನ್ ಮಾಡಲು ಬೆಳಗಾವಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅಬನಾಳಿ ಗ್ರಾಮದ ಸುತ್ತಮುತ್ತಲಿನ ಗ್ರಾಮಸ್ಥರ ಥ್ರೋಟ್ ಸ್ವ್ಯಾಬ್ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ.