ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಜಿಲ್ಲೆಯಲ್ಲಿಂದು 9 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾ ಪೀಡಿತರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದ ಇಬ್ಬರಿಗೆ, ಪೀರನವಾಡಿ ಗ್ರಾಮದ ಓರ್ವನಿಗೆ ಸೋಂಕು ತಗುಲಿದೆ. ಅಥಣಿ ನಗರದ ಇಬ್ಬರಿಗೆ ಹಾಗೂ ಅಥಣಿ ತಾಲೂಕಿನ ಶಿರಗುಪ್ಪಿ, ಐನಾಪುರ, ಹುಲಗಬಾಳಿ ಗ್ರಾಮದ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಗೆ ಭೇಟಿ ನೀಡಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ವ್ಯಕ್ತಿಗೂ ಸೋಂಕು ತಗುಲಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಒಂಭತ್ತು ಜನರ ಪೈಕಿ ಇಬ್ಬರ ಟ್ರಾವೆಲ್ ಹಿಸ್ಟರಿ ಮಾತ್ರ ಪತ್ತೆಯಾಗಿದ್ದು, ಉಳಿದವರ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚಲಾಗುತ್ತಿದೆ.
ಜಿಲ್ಲೆಯಲ್ಲಿ ಕೊರೊನಾಗೆ ಈವರೆಗೆ 7 ಜನರು ಮೃತಪಟ್ಟಿದ್ದು, 342 ಜನ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಸದ್ಯ ಜಿಲ್ಲೆಯಲ್ಲಿ 101 ಆ್ಯಕ್ಟೀವ್ ಕೇಸ್ಗಳಿದ್ದು, ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.