ETV Bharat / state

ಬೆಳಗಾವಿಯಲ್ಲಿ ಮತ್ತೆ 7 ವಿದ್ಯಾರ್ಥಿಗಳಿಗೆ ಕೊರೊನಾ: ಗ್ರಾಮಕ್ಕೆ ತಾಲೂಕಾಡಳಿತ ದೌಡು - Corona firm to 7 students in Belagavi

ಎಂ.ತಿಮ್ಮಾಪುರ ಗ್ರಾಮದಲ್ಲಿ ಈ ಹಿಂದೆ 23 ಜನ ವಿದ್ಯಾರ್ಥಿಗಳಿಗೆ ಕೋವಿಡ್​ ತಗುಲಿದ್ದು, ಇಂದು 7 ಜನ ಸೇರಿ ಒಟ್ಟು 30 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ತಾಲೂಕಾಡಳಿತ ಗ್ರಾಮಕ್ಕೆ ಭೇಟಿ ನೀಡಿ ಮಕ್ಕಳ ಸುರಕ್ಷತಾ ಕ್ರಮಕ್ಕೆ ಮುಂದಾಗಿದೆ.

Corona firm to 7 students in Belagavi
ಬೆಳಗಾವಿಯಲ್ಲಿ ಮತ್ತೆ 7 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
author img

By

Published : Oct 10, 2020, 12:25 PM IST

ಬೆಳಗಾವಿ: ರಾಜ್ಯ ಸರ್ಕಾರದ ವಿದ್ಯಾಗಮ ಯೋಜನೆಯಡಿ ವಠಾರದಲ್ಲಿ ಪಾಠ ಕೇಳಿದ್ದ ಜಿಲ್ಲೆಯ ರಾಮದುರ್ಗ ತಾಲೂಕಿನ ಮತ್ತೆ 7 ಜನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ತಾಲೂಕಾಡಳಿತ ಗ್ರಾಮಕ್ಕೆ ಭೇಟಿ ನೀಡಿ ಮಕ್ಕಳ ಸುರಕ್ಷತೆ ಕ್ರಮಕ್ಕೆ ಮುಂದಾಗಿದೆ. ಎಂ.ತಿಮ್ಮಾಪುರ ಗ್ರಾಮದಲ್ಲಿ ಈ ಹಿಂದೆ 23 ಜನ ವಿದ್ಯಾರ್ಥಿಗಳಿಗೆ ಕೋವಿಡ್​ ತಗುಲಿದ್ದು, ಇಂದು 7 ಜನ ಸೇರಿ ಒಟ್ಟು 30 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ವಿದ್ಯಾಗಮ ತರಗತಿಗಳಿಗೆ ಹಾಜರಾಗುತ್ತಿದ್ದ 130 ವಿದ್ಯಾರ್ಥಿಗಳಿಗೆ ಅ.4 ಹಾಗೂ 5 ರಂದು ಎರಡು‌ ದಿನ ರ‍್ಯಾಪಿಡ್​ ಟೆಸ್ಟ್​ ಮಾಡಲಾಗಿತ್ತು. ಅದರಲ್ಲಿ ಒಟ್ಟು 30 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.

ಈ ಎಲ್ಲ 30 ವಿದ್ಯಾರ್ಥಿಗಳಿಗೂ ಯಾವುದೇ ರೋಗದ ಗುಣಲಕ್ಷಣ ಇರದ ಹಿನ್ನೆಲೆಯಲ್ಲಿ ಹೋಮ್ ಐಸೋಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಎಂ.ತಿಮ್ಮಾಪುರದಲ್ಲಿ ಸದ್ಯ ವಿದ್ಯಾಗಮ ಯೋಜನೆಯಡಿ ಪಾಠ ಸ್ಥಗಿತಗೊಳಿಸಲಾಗಿದೆ. ಮಕ್ಕಳಿಗೆ ಪಾಠ ಮಾಡುತ್ತಿದ್ದ 6 ಶಿಕ್ಷಕರಿಗೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ತಾಲೂಕಾಡಳಿತ ಸೂಚನೆ ನೀಡಿದೆ.

ಶಾಲೆಯ ಮುಖ್ಯ ಶಿಕ್ಷಕರಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದು, ಅವರ ವರದಿ ನೆಗೆಟಿವ್ ಬಂದಿದೆ ಎಂದು ರಾಮದುರ್ಗ ಬಿಇಒ ಎಂ.ಆರ್.ಅಲಾಸೆ ಮಾಹಿತಿ ನೀಡಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.