ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು 90 ಸೋಂಕಿತರು ಗುಣಮುಖರಾಗಿದ್ದು, 54 ಜನರಿಗೆ ಸೋಂಕು ವಕ್ಕರಿಸಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5447 ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೂವರು ಬಲಿಯಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 97ಕ್ಕೇರಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 90 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 3097 ಸಕ್ರಿಯ ಪ್ರಕರಣಗಳಿವೆ.