ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಿಂದ ಮರಳಿದ್ದ 7 ತಿಂಗಳ ಹೆಣ್ಣು ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮಗುವಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲ್ಲೂರ ಗ್ರಾಮವನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಆದೇಶ ಹೊರಡಿಸಿದ್ದಾರೆ. ಕಂಟೇನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿ ಬರುವ ಕಲ್ಲೂರ ಗ್ರಾಮದ ವ್ಯಾಪ್ತಿಯಲ್ಲಿ 120 ಮನೆಗಳಿದ್ದು, 895 ಜನರು ವಾಸಿಸುತ್ತಿದ್ದಾರೆ. ಸದ್ಯ ಜಿಲ್ಲೆಯಲ್ಲೀಗ ಕಂಟೇನ್ಮೆಂಟ್ ಝೋನ್‌ಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.