ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ 45 ವರ್ಷ ವಯಸ್ಸಿನ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ.
128ನೇ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 45 ವರ್ಷದ ವ್ಯಕ್ತಿಗೂ ಕೊರೊನಾ ಸೋಂಕು ತುಗುಲಿದೆ. ಸೋಂಕು ತಗುಲಿದ ಈತ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದವರಾಗಿದ್ದಾರೆ. 128ನೇ ಸೋಂಕಿತ ವ್ಯಕ್ತಿ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿ ಜಿಲ್ಲೆಗೆ ಮರಳಿದ್ದ.
ಇನ್ನು ಈ ಸೋಂಕಿತ ವ್ಯಕ್ತಿಯಿಂದಲೇ ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ 15 ಜನರಿಗೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗಿದೆ. ಹೀಗಾಗಿ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.