ಬೆಳಗಾವಿ: ನಗರದ ದಕ್ಷಿಣ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್‌ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಕುರಿತು ಸ್ವತಃ ಶಾಸಕರೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್‌ಲೋಡ್ ಮಾಡಿ ಸ್ಪಷ್ಟಪಡಿಸಿದ್ದಾರೆ.
ಕನ್ನಡ ಮತ್ತು ಮರಾಠಿ ಭಾಷೆಯಲ್ಲಿ ಮಾಹಿತಿ ನೀಡಿದ ಶಾಸಕ ಅಭಯ್ ಪಾಟೀಲ್, ಮೊನ್ನೆ ನನ್ನ ಕೋವಿಡ್ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸೂಚನೆ ಮೇರೆಗೆ ಹೋಮ್ ಕ್ವಾರಂಟೈನ್ ಆಗಿದ್ದೇನೆ. ವೈದ್ಯರು ನೀಡಿದ ಔಷಧಿ ಸ್ವೀಕರಿಸಿ ಆರೋಗ್ಯವಾಗಿದ್ದೇನೆ. ನನ್ನ ಕ್ಷೇತ್ರದ ಜನರು ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.
ಕೊರೊನಾ ವಿರುದ್ಧ ಹೋರಾಡಲು ಸರ್ಕಾರ ಕೊಟ್ಟ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸೋಣ ಎಂದ ಅವರು, ಕೆಲವೇ ದಿನಗಳಲ್ಲಿ ತಮ್ಮ ಸೇವೆಗೆ ಬರುತ್ತೇನೆ ಎಂದು ತಿಳಿಸಿದ್ದಾರೆ. ಆದರೆ, ರಾಜ್ಯಾದ್ಯಂತ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದ ಸುದ್ದಿಯಲ್ಲಿದ್ದು, ಈದೀಗ ಸುಖಾಂತ್ಯ ಆದರೂ ಘಟನೆ ಕುರಿತು ತುಟಿಬಿಚ್ಚದ ಶಾಸಕ ಅಭಯ್ ಪಾಟೀಲ್ ವಿರುದ್ಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.