ETV Bharat / state

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ: ಬಿಗಿ ಬಂದೋಬಸ್ತ್​

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಅಲ್ಲಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಗಡಿ ಭಾಗದಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ
Corona Negative Report is mandatory for those who come to from Maharashtra
author img

By

Published : Feb 22, 2021, 12:46 PM IST

Updated : Feb 22, 2021, 1:55 PM IST

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಅಲ್ಲಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ.

ಗಡಿ ಭಾಗದಲ್ಲಿ ತಪಾಸಣೆ ನಡೆಸುತ್ತಿರುವ ಪೊಲೀಸರು

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗಗಳಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್​ ವ್ಯವಸ್ಥೆ ಮಾಡಿದ್ದಾರೆ.

ಮುಂಬೈ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ರಲ್ಲಿರುವ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಚೆಕ್ ಬಳಿ ಪೊಲೀಸರು ತೀವ್ರ ತಪಾಸಣೆ ಕೈಗೊಂಡಿದ್ದಾರೆ. ಇದರಿಂದ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಸರ್ಕಾರದ ನಿಯಮದಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಓದಿ: ಹೆತ್ತ ಮಗಳನ್ನೇ ಕೊಡಲಿಯಿಂದ ಹತ್ಯೆ ಮಾಡಿದ ಪಾಪಿ ತಂದೆ!

ಸುರಕ್ಷತೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕೋವಿಡ್ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯ ಪ್ರವೇಶಿಸಲು ಪೊಲೀಸರು ಅನುಮತಿ ನೀಡುತ್ತಿದ್ದಾರೆ.

Last Updated : Feb 22, 2021, 1:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.