ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಮೂಡಲಗಿ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಮೂಡಲಗಿ ಪಟ್ಟಣದ ಪೊಲೀಸ್ ಠಾಣೆಯ 33 ವರ್ಷದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಮಹಾಮಾರಿ ಬಂದ ನಾಲ್ಕು ತಿಂಗಳಿಂದ ಹಗಲಿರುಳೆನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ವಾರಿಯರ್ಸ್ರನ್ನು ಬೆಂಬಿಡದಂತೆ ಕೊರೊನಾ ಕಾಡುತ್ತಿದೆ. ಇದು ಪೊಲೀಸ್ ಇಲಾಖೆ ಆತಂಕಕ್ಕೆ ಕಾರಣವಾಗಿದೆ.