ಚಿಕ್ಕೋಡಿ: ನಗರದಲ್ಲಿ ಮತ್ತೆ ಮೂವರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಮಾಹಿತಿ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಕ್ಕೆ ಏರಿಕೆಯಾಗಿದ್ದು, ಹುಕ್ಕೇರಿ ತಾಲೂಕಿನ ಕೊಣಕೇರಿ ಪ್ರಾಥಮಿಕ ಶಾಲೆಯ ಶಿಕ್ಷಕಿ, ಗೋಕಾಕ ತಾಲೂಕಿನ ಕನಸಗೇರಿ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಹೀರೆನಂದಿ ಸರ್ಕಾರಿ ಫ್ರೌಢ ಶಾಲೆಯ ಶಿಕ್ಷಕನಿಗೆ ಕೊರೊನಾ ವಕ್ಕರಿಸಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ 18, ಚಿಕ್ಕೋಡಿಯಲ್ಲಿ 4 ಶಿಕ್ಷಕರಿಗೆ ಕೊರೊನಾ ಪಾಸಿಟಿವ್..
ಮುಂಜಾಗೃತಾ ಕ್ರಮವಾಗಿ ಮೂರು ಸರ್ಕಾರಿ ಶಾಲೆಗಳನ್ನು ಬಂದ್ ಮಾಡಲಾಗಿದೆ ಎಂದು ಡಿಡಿಪಿಐ ಮಾಹಿತಿ ನೀಡಿದ್ದಾರೆ.