ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸಿದ್ದ ಮತ್ತೊಬ್ಬ ಗರ್ಭಿಣಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 127ಕ್ಕೆ ಏರಿಕೆಯಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಐವರು ಗರ್ಭಿಣಿಯರಿಗೆ ಕೊರೊನಾ ಸೋಂಕು ವಕ್ಕರಿಸಿದ್ದು, ಮೇ 11ರಂದು ಮುಂಬೈನಿಂದ ಶಿವಪೇಟೆಗೆ, 27 ವರ್ಷ ವಯಸ್ಸಿನ 4 ತಿಂಗಳ ಗರ್ಭಿಣಿ, ತನ್ನ ಪತಿ ಹಾಗೂ ನಾಲ್ವರು ಕುಟುಂಬ ಸದಸ್ಯರೊಂದಿಗೆ ಜಿಲ್ಲೆಗೆ ಆಗಮಿಸಿದ್ದರು. ಇಂದು ಈ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರುವುದು ವರದಿಯಲ್ಲಿ ದೃಢಪಟ್ಟಿದೆ.
ಈ ಕುಟುಂಬದವರ ಗ್ರಾಮ ಪ್ರವೇಶಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ, ರಾಮದುರ್ಗದ ಬಿಸಿಎಂ ಹಾಸ್ಟೆಲ್‌ನಲ್ಲಿ ಆರು ಜನರನ್ನು ಕ್ವಾರಂಟೈನ್ನಲ್ಲಿ ಇರಿಸಲಾಗಿತ್ತು. ಈ ವೇಳೆ ಆರು ಜನರ ಗಂಟಲು ದ್ರವ ಪ್ರಯೋಗಾಲಯಕ್ಕೆ ಕಳಿಹಿಸಿದ್ದು, ಗರ್ಭಿಣಿಗೆ ಮಾತ್ರ ಸೋಂಕು ದೃಢಪಟ್ಟಿದೆ. ಉಳಿದವರ ವರದಿ ನೆಗಟಿವ್ ಬಂದಿದೆ.