ಬೆಳಗಾವಿ: ಇಲ್ಲಿನ ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.
ಸೋಂಕಿಗೆ ಒಳಗಾದ ಇಬ್ಬರೂ ವಿದ್ಯಾರ್ಥಿನಿಯರು ಬಿಹಾರ ಮೂಲದವರು ಎಂದು ತಿಳಿದುಬಂದಿದೆ. ಇವರು ನಗರದ ಖಾಸಗಿ ದಂತ ವೈದ್ಯಕೀಯ ಮಹಾವಿದ್ಯಾಲಯದ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜಿನ ವಸತಿ ನಿಲಯದಲ್ಲಿರುವ ಈ ಇಬ್ಬರು ಸ್ವಯಂ ಪ್ರೇರಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.
ಇದನ್ನೂ ಓದಿ: ತುಮಕೂರಲ್ಲಿ ಕೇರಳ ಮೂಲದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ
ಇಬ್ಬರಲ್ಲೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಲ ದಿನಗಳಿಂದ ಜಿಲ್ಲೆಯಲ್ಲಿ ಒಂದೂ ಪ್ರಕರಣ ದಾಖಲಾಗಿರಲಿಲ್ಲ. ಇದೀಗ ಎರಡು ಪ್ರಕರಣಗಳು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿವೆ.
ಇತ್ತೀಚೆಗೆ ಧಾರವಾಡದ ಎಸ್ಡಿಎಂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಚಾಮರಾಜನಗರ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಸೋಂಕಿತರೆಲ್ಲ ಕ್ವಾರಂಟೈನ್ನಲ್ಲಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಲ್ಯಾಬ್ಗೆ ಕಳಿಸಲಾಗಿದೆ.