ಚಿಕ್ಕೋಡಿ: ಕೊರೊನಾ ಭೀತಿ ಹಿನ್ನೆಲೆ ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಸ್ವಯಂ ಪ್ರೇರಿತವಾಗಿ ತಮ್ಮ ಊರಿನ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ದಿಗ್ಬಂಧನ ಹಾಕಿಕೊಂಡಿದ್ದಾರೆ. ಆದ್ರೆ ಇದರಿಂದ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಗೂಡ್ಸ್ ವಾಹನ ಚಾಲಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಪಾಸ್ ಹೊಂದಿರುವ ಅಗತ್ಯ ವಸ್ತುಗಳು ಹಾಗೂ ಪಡಿತರ ಸಾಗಾಟ ವಾಹನಗಳಿಗೂ ಸಹ ಗ್ರಾಮಸ್ಥರು ನಮ್ಮ ಊರಿನಲ್ಲಿ ಪ್ರವೇಶವಿಲ್ಲ ಎಂದು ವಾಹನಗಳನ್ನು ತಡೆದು ವಾಪಸ್ ಕಳುಹಿಸುತ್ತಿದ್ದಾರೆ ಎನ್ನಲಾಗಿದೆ.