ಬೆಳಗಾವಿ: ಗಡಿ ಜಿಲ್ಲೆಯಲ್ಲಿ ಇಂದು ಕೊರೊನಾಗೆ ನಾಲ್ವರು ಬಲಿಯಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೇರಿಕೆಯಾಗಿದೆ.
ನಗರದ 58 ವರ್ಷ ವಯಸ್ಸಿನ ಮಹಿಳೆ. ಅಥಣಿಯ 68 ಹಾಗೂ 62 ವರ್ಷದ ಇಬ್ಬರು ಪುರುಷ ಮತ್ತು ರಾಮದುರ್ಗದ 48 ವರ್ಷ ವಯಸ್ಸಿನ ಪುರುಷ ಕೊರೊನಾಗೆ ಬಲಿಯಾಗಿದ್ದಾರೆ. ಬೆಳಗಾವಿಯಲ್ಲಿಂದು ಹೊಸದಾಗಿ 214 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 1529ಕ್ಕೆ ಏರಿಕೆಯಾಗಿದೆ.
ಈವರೆಗೆ ಕೊರೊನಾಗೆ ಬೆಳಗಾವಿ ಜಿಲ್ಲೆಯಲ್ಲಿ 34 ಜನರು ಮೃತಪಟ್ಟಿದ್ದು, 426 ಜನರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1069 ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ವಾರ್ಡ್ ಹಾಗೂ ಕೋವಿಡ್ ಕೇರ್ ಸೇಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.