ಅಥಣಿ: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಅಥಣಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಸಭೆ ನಡೆಸಲಾಯಿತು.
ಸಂಸದ ಅಣ್ಣಾ ಸಾಹೇಬ ಜೊಲ್ಲೆ ಮತ್ತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಅಥಣಿ ತಾಲೂಕು ವ್ಯಾಪ್ತಿಯಲ್ಲಿ ಕೊರೊನಾ ಮುಂಜಾಗೃತಾ ಸಿದ್ಧತೆಯ ಮಾಹಿತಿ ಪಡೆದು, ನಂತರ ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಹೋಂ ಕ್ವಾರಂಟೇನ್, ಆಸ್ಪತ್ರೆ ಲಭ್ಯತೆ ಹಾಗೂ ಸ್ವಚ್ಛತೆ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚೆ ನಡೆದಿದೆ. ಇನ್ನು ಮಹಾರಾಷ್ಟ್ರದಿಂದ 900 ಅಧಿಕ ಜನರು ಬಂದಿದ್ದು, ಅದರಲ್ಲಿ 24 ಜನರು ಹೋಂ ಕ್ವಾರಂಟೇನ್ ಪೂರ್ಣಗೊಳಿಸಿದ್ದಾರೆ. ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ಈ ಸಮಯದಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.