ಬೆಳಗಾವಿ: ಹಿರೇಬಾಗೇವಾಡಿ ಗ್ರಾಮವೊಂದರಲ್ಲೇ 36 ಕೊರೊನಾ ಕೇಸ್‌ಗಳು ಪತ್ತೆಯಾಗಿದ್ದು, ಆದಷ್ಟು ಬೇಗ ಈ ಗ್ರಾಮದಲ್ಲಿ ರ‍್ಯಾಪಿಡ್ ಟೆಸ್ಟ್ ಮಾಡಿಸಬೇಕು ಎಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರೇಬಾಗೇವಾಡಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಗ್ರಾಮದಲ್ಲಿ ಮೂಲ ಸೌಕರ್ಯದ ಕೊರತೆ ಉಂಟಾಗುತ್ತಿದ್ದು, ಗ್ರಾಮದಲ್ಲಿ ಜನರ ಜೀವನ ಸಂಕಷ್ಟಕ್ಕೆ ದೂಡಿದೆ.
ಗ್ರಾಮದ ಅನಾರೋಗ್ಯ ಪೀಡಿತರು ನಿತ್ಯ ಕರೆಮಾಡಿ ತಮ್ಮ ಅಳಲು ತೋಡಿಕೊಳ್ಳುತ್ತಿದ್ದು, ಜಾನುವಾರುಗಳಿಗೆ ತಿನ್ನಿಸಲು ಮೇವು ಸಹ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸಿ ನಾನು ಸಹ ನಾಲ್ಕು ಭಾರಿ ಗ್ರಾಮಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ.
ತಬ್ಲಿಘಿ ಜಮಾತ್ ಮೊದಲು ಹೊರ ಬರಲಿಲ್ಲ. ಹೀಗಾಗಿ ಗ್ರಾಮದಲ್ಲಿ ಸೋಂಕು ತೀವ್ರವಾಗಿ ಹರಿಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನನಗೆ ಬಂದಿರೋ ಮಾಹಿತಿ ಪ್ರಕಾರ 35 ಜನರನ್ನು ಸಾಮೂಹಿಕ ಕ್ವಾರಂಟೈನ್ ಮಾಡಿದ್ದಾರೆ. ಇದರಿಂದ ಗ್ರಾಮದಲ್ಲಿ ಸೋಂಕು ತೀವ್ರವಾಗಿ ಹರಡಿದೆ. ಆದರೆ, ಈ ಆರೋಪವನ್ನು ಜಿಲ್ಲಾಧಿಕಾರಿ ತಳ್ಳಿ ಹಾಕಿದ್ದಾರೆ ಎಂದರು.
ಆದರೆ, ಈಗಾಗಲೇ ಗ್ರಾಮದ ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿ ಹಾಗೂ ಸಿಎಂ ಬಿ. ಎಸ್.ಯಡಿಯೂರಪ್ಪನವರಿಗೆ ಈ ಬಗ್ಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದರು.