ಬೆಳಗಾವಿ: ರಾಜು ತಳವಾರ ಎಂಬ ವ್ಯಕ್ತಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಜಾರಕಿಹೊಳಿ ಸಹೋದರರು ನಮ್ಮ ಸಹಾಯಕ್ಕೆ ಧಾವಿಸಿ ನಾಳೆ 11 ಗಂಟೆಯೊಳಗೆ ಸೂಕ್ತ ನ್ಯಾಯ ಕೊಡಿಸಬೇಕು. ಇಲ್ಲವಾದಲ್ಲಿ ಗೋಕಾಕ್ ತಾಲೂಕಿನ ಅಂಕಲಗಿ ಪೊಲೀಸ್ ಠಾಣೆ ಎದುರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಗೋಕಾಕ ತಾಲೂಕಿನ ಲಗಮೇಶ್ವರ ಗ್ರಾಮದ ಬಸವ್ವ ಯಲ್ಲಪ್ಪ ಕೊಪ್ಪದ ಹಾಗೂ ಯಲ್ಲಪ್ಪ ಕೊಪ್ಪದ ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಇವರಿಬ್ಬರು ಹಲವು ವರ್ಷಗಳಿಂದ ತರಕಾರಿ ಮಾರಾಟ ಮಾಡಿ ತಮ್ಮ ಹೊಟ್ಟೆ ಬಟ್ಟೆ ಕಟ್ಟಿಕೊಂಡು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು. ಆದರೆ, ರಾಜು ತಳವಾರ ಎಂಬುವವರು ಪದೇ ಪದೇ ಹಲ್ಲೆ ಮಾಡುತ್ತಿದ್ದಾರೆ. ಇದೀಗ ಆತ ಮಗನನ್ನು ಕಿಡ್ನಾಪ್ ಮಾಡಲು ಪ್ರಯತ್ನಿಸುತ್ತಿದ್ದಾನೆ. ಈ ಕುರಿತು ಅಂಕಲಗಿ ಪೊಲೀಸರಿಗೆ ದೂರು ನೀಡಲು ಹೋದ್ರೂ ದೂರು ಸ್ವೀಕರಿಸುತ್ತಿಲ್ಲ ಎಂದು ದೂರಿದ್ದಾರೆ.
ಹೀಗಾಗಿ ಜಾರಕಿಹೊಳಿ ಸಹೋದರರು ನಮ್ಮ ನೆರವಿಗೆ ಧಾವಿಸಿ ನ್ಯಾಯ ಒದಗಿಸಿಕೊಡಬೇಕು. ಇಲ್ಲವಾದಲ್ಲಿ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.