ಬೆಳಗಾವಿ: ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರಿದಿದೆ. ಒಂದೇ ದಿನಕ್ಕೆ ಕೊರೊನಾಗೆ 10 ಸೋಂಕಿತರು ಮೃತರಾಗಿದ್ದಾರೆ.
ಈ ಮೂಲಕ ಸೋಂಕಿಗೆ ಮೃತಪಟ್ಟವರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 60 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 3,681 ಕ್ಕೇರಿಕೆಯಾಗಿದೆ.
ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 29 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 1,054 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ ಸದ್ಯ 2,542 ಆ್ಯಕ್ಟಿವ್ ಕೇಸ್ಗಳಿವೆ.