ETV Bharat / state

ಮಹಾರಾಷ್ಟ್ರದಲ್ಲಿ ಕೋವಿಡ್​ ಉಲ್ಬಣ.. ಕೊರೊನಾ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ಕರ್ನಾಟಕ ಪ್ರವೇಶ

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ-ಮಹರಾಷ್ಟ್ರ ಗಡಿಯಲ್ಲಿರುವ ಕಾಗವಾಡ ಚೆಕ್ ಪೋಸ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಸಂಬಂಧ ಅಲ್ಲಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೋವಿಡ್​ ನೆಗೆಟಿವ್​ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.

ಕೊರೊನಾ ನೆಗಟಿವ್ ವರದಿ ಇದ್ದರೆ ಮಾತ್ರ ಕರ್ನಾಟಕ ಪ್ರವೇಶ
Covid Negative report is compulsory in Belgaum -Maharashtra Border
author img

By

Published : Apr 10, 2021, 1:18 PM IST

Updated : Apr 10, 2021, 2:28 PM IST

ಚಿಕ್ಕೋಡಿ : ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ-ಮಹರಾಷ್ಟ್ರ ಗಡಿಯಲ್ಲಿರುವ ಕಾಗವಾಡ ಚೆಕ್ ಪೊಸ್ಟ್‌ನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುತ್ತಿರುವ ಪ್ರತಿಯೊಬ್ಬರಿಗೂ ಕೊರೊನಾ ನೆಗೆಟಿವ್ ವರದಿ‌ ಕಡ್ಡಾಯ ಎಂದು ಕಾಗವಾಡ ತಹಶೀಲ್ದಾರ್​​ ಪ್ರಮೀಳಾ ದೇಶಪಾಂಡೆ ಹೇಳಿದ್ದಾರೆ.

ಕಾಗವಾಡ ತಹಶೀಲ್ದಾರ್​ ಕಚೇರಿಯಲ್ಲಿ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಅವರು, ಈಗಾಗಲೇ ಕಾಗವಾಡ ತಾಲೂಕಿನಲ್ಲಿ ಮೂರು ಚೆಕ್​​​ಪೋಸ್ಟ್​ ಹಾಕಲಾಗಿದೆ. ಮಹಾರಾಷ್ಟ್ರದಿಂದ ಕೆಲ ವೈದ್ಯರು ಹೋಗಿ ಬಂದು ಮಾಡುತ್ತಾರೆ. ಅವರಿಗೂ ಕೂಡಾ 72 ಗಂಟೆ ಒಳಗಿನ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ‌. ದಿನಂಪ್ರತಿ ಕರ್ನಾಟಕದ ನೂರಾರು ಜನರು ಮಹಾರಾಷ್ಟ್ರದ ಆಸ್ಪತ್ರೆಗಳಿಗೆ ಅವಲಂಬಿತವಾಗಿದ್ದು, ಅವರಿಗೂ ಕೂಡಾ ಮಹಾರಾಷ್ಟ್ರದ ಆಸ್ಪತ್ರೆಗಳಲ್ಲಿ ಕೊರೊನಾ ನೆಗೆಟಿವ್ ವರದಿ ಇದ್ದರೆ ಮಾತ್ರ ಚಿಕಿತ್ಸೆ ನೀಡುತ್ತಿದ್ದಾರೆ ಎಂದರು.

ಓದಿ: ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ಜನರು ಮಹಾರಾಷ್ಟ್ರದ ಆಸ್ಪತ್ರೆಗೆ ತೋರಿಸಲು ಹೋದಾಗ ಕೊರೊನಾ ನೆಗೆಟಿವ್ ವರದಿ 72 ಗಂಟೆ ಒಳಗಿದ್ದರೆ ಅದು ನಡೆಯುತ್ತದೆ. ಹೀಗಾಗಿ ಮಹಾರಾಷ್ಟ್ರದ ಆಸ್ಪತ್ರೆಗೆ ತೆರಳುವಂತಹ ಕರ್ನಾಟಕ ಜನತೆ ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿ ತೆಗೆದುಕೊಂಡು ಹೋಗುವುದು ಅನಿವಾರ್ಯವಾಗಿದೆ.

Last Updated : Apr 10, 2021, 2:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.