ಚಿಕ್ಕೋಡಿ (ಬೆಳಗಾವಿ): ಕೊರೊನಾ 2ನೇ ಅಲೇ ದಿನದಿಂದ ದಿನಕ್ಕೆ ಹೆಚ್ಚುತ್ತಲಿರುವ ಹಿನ್ನೆಲೆ ಬೆಳಗಾವಿ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದು, ವೈದ್ಯಕೀಯ ತಪಾಸಣೆ ಹೊರತುಪಡಿಸಿ ಉಳಿದವರು ಕರ್ನಾಟಕ ಪ್ರವೇಶಿಸಬೇಕಾದರೆ ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿ ಇರಬೇಕು ಎಂದು ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ವಿವಿಧ ಪಿಹೆಚ್‌ಸಿ ಸೆಂಟರ್ಗಳ ಭೇಟಿ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಗಡಿಯಲ್ಲಿ ಕಟ್ಟೆಚ್ಚರ ವಹಿಸಿದ್ದು, ಮಹಾರಾಷ್ಟ್ರ ಕರ್ನಾಟಕದ ಗಡಿ ಭಾಗದಲ್ಲಿ ಹೆಚ್ಚಾಗಿ ಕರ್ನಾಟಕ ಜನರು ಪಕ್ಕದ ಮಹಾರಾಷ್ಟ್ರದ ಆಸ್ಪತ್ರೆಗಳ ಮೇಲೆ ಅವಲಂಬಿತವಾಗಿದ್ದಾರೆ. ಮಹಾರಾಷ್ಟ್ರದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುವವರಿಗೆ ಮಾತ್ರ ಕೋವಿಡ್ ತಪಾಸಣೆ ಇಲ್ಲ. ಇನ್ನುಳಿದವರಿಗೆ ಕರ್ನಾಟಕ ಪ್ರವೇಶ ಮಾಡಬೇಕಾದರೆ ಕೋವಿಡ್ ನೆಗಟಿವ್ ವರದಿ ಕಡ್ಡಾಯ ಎಂದರು.
ಈಗಾಗಲೇ ಕಾಗವಾಡ ತಾಲೂಕಿನಲ್ಲಿ ಗಣೇಶವಾಡಿ, ಮಂಗಸೂಳಿ ಹಾಗೂ ಮಿರಜ್ ಕಾಗವಾಡ ರಸ್ತೆಯಲ್ಲಿ ಹೀಗೆ ಮೂರು ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿದೆ. ಬಸ್‌ಗಳಲ್ಲಿ ಸಂಚರಿಸುವ ಜನರಿಗೆ ಕೊರೊನಾ ತಪಾಸಣೆ ಮಾಡಿ ಬಿಡಲಾಗುತ್ತಿದೆ. ದಿನಂಪ್ರತಿ ಮಹಾರಾಷ್ಟ್ರಕ್ಕೆ ತೆರಳುವ ಕಾರ್ಮಿಕರ ಬಗ್ಗೆ ಮೇಲಿನ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಇದನ್ನೂ ಓದಿ: ಮಹಾರಾಷ್ಟ್ರ, ಪಂಜಾಬ್, ಕರ್ನಾಟಕ, ಛತ್ತೀಸ್‌ಗಢ, ಗುಜರಾತ್ನಲ್ಲಿ ಕೊರೊನಾ ತೀವ್ರ ಏರಿಕೆ