ETV Bharat / state

ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್ ಸೋಂಕು​: ಜನರಲ್ಲಿ ಆತಂಕ

ಅಥಣಿ ತಾಲೂಕಿನಲ್ಲಿ ಕೊರೊನಾ ಸೋಂಕು ತನ್ನ ವೇಗವನ್ನು ಹೆಚ್ಚಿಸಿಕೊಂಡಿದೆ. ನಿನ್ನೆ ವರದಿಯಲ್ಲಿ ತಾಲೂಕಿನಲ್ಲಿ 7 ಪ್ರಕರಣಗಳು ದಾಖಲಾಗಿವೆ.

Covidi Increasing in Athana
ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್​: ಜನರಲ್ಲಿ ಆತಂಕ
author img

By

Published : Jul 5, 2020, 8:29 AM IST

ಅಥಣಿ: ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಎಲ್ಲೆಡೆ ಆತಂಕ ಸೃಷ್ಟಿಯಾಗಿದೆ. ತಾಲೂಕಿನಲ್ಲಿ ಈವರೆಗೆ 25 ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಬಲಿಯಾಗಿದ್ದಾರೆ.

Covidi Increasing in Athana
ಅಥಣಿಯಲ್ಲಿ ಹೆಚ್ಚುತ್ತಿರುವ ಕೋವಿಡ್​: ಜನರಲ್ಲಿ ಆತಂಕ

ಅಥಣಿ ಪಟ್ಟಣದ 5 ಪ್ರದೇಶಗಳನ್ನು ಸೀಲ್​ಡೌನ್ ಮಾಡಲಾಗಿದ್ದು, ಶಿವಯೋಗಿ ನಾಡಿನ ಜನರಲ್ಲಿ ಆತಂಕ ಮೂಡಿಸಿದೆ. ತಾಲೂಕಿನಲ್ಲಿ ವ್ಯಾಪಾರಸ್ಥರು ಸ್ವಯಂ ಘೋಷಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಪಟ್ಟಣದ ಮತ್ತೊಂದು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯನ್ನು ಸೀಲ್​ಡೌನ್ ಮಾಡಲಾಗಿದೆ. ಅಥಣಿಯ ಝುಂಜರವಾಡ, ಅನಂತಪುರ, ಸಂಕೋನಟ್ಟಿ, ಗುಂಡೆವಾಡಿ, ಚಿಕ್ಕಟ್ಟಿ, ಗ್ರಾಮಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆಯ ವರದಿಯಲ್ಲಿ ತಾಲೂಕಿನಲ್ಲಿ 7 ಪ್ರಕರಣಗಳು ದಾಖಲಾಗಿವೆ.

ದಿನದಿಂದ ದಿನಕ್ಕೆ ಕೊರೊನಾ ಹಾವಳಿ ತಾಲೂಕಿನೆಲ್ಲೆಡೆ ಹೆಚ್ಚುತ್ತಿರುವುದರಿಂದ ಜನರಲ್ಲಿ ಆತಂಕ ಶುರುವಾಗಿದೆ. ಆದ್ದರಿಂದ ಜನರು ಮಾಸ್ಕ್​ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.