ಚಿಕ್ಕೋಡಿ: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ಸಿಆರ್ಪಿಎಫ್ ಯೋಧನೊಬ್ಬ ಹಲ್ಲೆ ನಡೆಸಿರುವ ಆರೋಪ ಪ್ರಕರಣ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದೆ.
ಯೋಧ ಸಚಿನ್ ಸಾವಂತ ಮನೆಯ ಹೊರಗೆ ಅನಗತ್ಯವಾಗಿ ತಿರುಗಾಡುತ್ತಿದ್ದ. ಆಗ ಆತನಿಗೆ ಪೊಲೀಸರು ಬುದ್ಧಿ ಹೇಳಿದ್ದಕ್ಕೆ ಪೊಲೀಸ್ ಸಿಬ್ಬಂದಿಯ ಕಾಲರ್ ಹಿಡಿದು, ಎಳೆದಾಡಿ ಹೊಡೆದಿದ್ದಾನೆ ಎಂದು ದೂರಲಾಗಿದೆ.
ಯೋಧನಿಗೆ ಪೊಲೀಸರು ಲಾಠಿ ರುಚಿ ತೋರಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.