ETV Bharat / state

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಬೆದರಿಕೆ ಹಾಕಿದ್ದ ಆರೋಪಿ ನಾಗ್ಪುರ್​ ಪೊಲೀಸರ ವಶಕ್ಕೆ.. ಕೈದಿಗೆ ಉಗ್ರರ ಜೊತೆ ಲಿಂಕ್ ಕುರಿತು ತನಿಖೆ - union minister nitin gadkari

ಕೇಂದ್ರ ಸಚಿವ ನಿತಿನ್‌ ಗಡ್ಕರಿಗೆ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿ ಜಯೇಶ್‌ ಪೂಜಾರಿಗೆ ಉಗ್ರ ಪಾಷಾ ಜೊತೆ ಲಿಂಕ್ ಇರುವ ಶಂಕೆ ವ್ಯಕ್ತವಾಗಿದೆ. ಈತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಮತ್ತು ಪಿಎಫ್‌ಐ ಪರ ಕೆಲಸ ಮಾಡುತ್ತಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

union minister nitin gadkari
ಕೇಂದ್ರ ಸಚಿವ ನಿತಿನ್‌ ಗಡ್ಕರಿ
author img

By

Published : Jul 15, 2023, 9:47 AM IST

Updated : Jul 15, 2023, 10:26 AM IST

ಬೆಳಗಾವಿ : ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಕರೆ ಮಾಡಿದ್ದ ಬೆಳಗಾವಿ ಹಿಂಡಲಗಾ ಜೈಲಿನ ಕೈದಿ ಜಯೇಶ್‌ ಪೂಜಾರಿಯು ಉಗ್ರ ಅಫ್ಸರ್‌ ಪಾಷಾ ಜತೆ ಸಂಪರ್ಕದಲ್ಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಜಯೇಶ್ ಪೂಜಾರಿಯು ಗಡ್ಕರಿಗೆ ಬೆದರಿಕೆ ಕರೆ ಮಾಡಿದ್ದಾಗ ಪಾಷಾ ಜತೆಗೆ ಬೆಳಗಾವಿ ಜೈಲಿನಲ್ಲಿದ್ದ. ಇದು ಭಯೋತ್ಪಾಕರ ಕುಮ್ಮಕ್ಕಿನ ಮೇಲೆ ನಡೆದ ಬೆದರಿಕೆಯೇ ಎಂಬ ಕುರಿತು ತನಿಖೆ ಚುರುಕುಗೊಳಿಸಲಾಗಿದೆ. ಹೀಗಾಗಿ, ಪಾಷಾನನ್ನು ಬಂಧಿಸಲು ನಾಗ್ಪುರ ಪೊಲೀಸರ ತಂಡವು ಶುಕ್ರವಾರ ಕರ್ನಾಟಕಕ್ಕೆ ಬಂದಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಸಚಿವ ಗಡ್ಕರಿ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಮಹಾರಾಷ್ಟ್ರದ ನಾಗ್ಪುರ ಎಟಿಎಸ್‌ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ಮಂಗಳೂರು ಮೂಲದ ಜಯೇಶ ಪೂಜಾರಿ ಎಂಬ ಕೈದಿ, ಜೈಲಿನಲ್ಲಿಯೇ ಇದ್ದುಕೊಂಡು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ಕಚೇರಿಗೆ ಜ. 14 ರಂದು ಕರೆ ಮಾಡಿ, 100 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನು. ಒಂದು ವೇಳೆ ಹಣ ಕೊಡದಿದ್ದರೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ.

ಈ ಕುರಿತು ಮಹಾರಾಷ್ಟ್ರ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿದ್ದರಿಂದ ಈ ಕರೆ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಂದಿದೆ ಎಂದು ಖಚಿತಪಡಿಸಿಕೊಂಡು ಪರಿಶೀಲನೆ ನಡೆಸಿದ್ದರು. ಆದರೆ, ಈ ಘಟನೆ ಮಾಸುವ ಮುನ್ನವೇ ಮಾ. 21 ರಂದು ಎರಡನೇ ಬಾರಿಗೆ ಜಯೇಶ್‌ ಕಾಂತಾ ಅಲಿಯಾಸ್‌ ಜಯೇಶ್‌ ಪೂಜಾರಿ ಮತ್ತೆ ನಾಗ್ಪುರದಲ್ಲಿರುವ ನಿತಿನ್‌ ಗಡ್ಕರಿ ಜನಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್‌ಗೆ ಕರೆ ಮಾಡಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದನು.

ಘಟನೆಯಿಂದ ಎಚ್ಚೆತ್ತುಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ನಾಗ್ಪುರದಲ್ಲಿರುವ ಗಡ್ಕರಿ ಕಚೇರಿಗೆ ಬಿಗಿ ಭದ್ರತೆ ಕಲ್ಪಿಸಿದ್ದರು. ಬಳಿಕ, ಜೀವ ಬೆದರಿಕೆ ಕರೆ ಎಲ್ಲಿಂದ ಬಂದಿತ್ತು ಎಂಬ ಬಗ್ಗೆ ಎಟಿಎಸ್‌ ಪೊಲೀಸರು ತನಿಖೆ ಕೈಗೊಂಡ ಹಿನ್ನೆಲೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಮಾ.28 ರಂದು ಬಂಧಿತ ಜಯೇಶ ಪೂಜಾರಿಯನ್ನು ನಾಗ್ಪುರ ಪೊಲೀಸರು ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದುಕೊಂಡು ತಮ್ಮೊಂದಿಗೆ ಕರದೊಯ್ದಿದ್ದರು.

ಇದನ್ನೂ ಓದಿ : ಗಡ್ಕರಿ ಕಚೇರಿಗೆ ಜೀವ ಬೆದರಿಕೆ ಕರೆ ಮಾಡಿದ್ದ ಕೈದಿ ವಶ: ಸ್ಯಾಂಟ್ರೊ ರವಿ ಅಕ್ರಮ ತನಿಖೆ ಚುರುಕು: ಆರಗ ಜ್ಞಾನೇಂದ್ರ

ಇದೀಗ, ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಜಯೇಶ್‌ ಪೂಜಾರಿ ಇರುವ ಹಿಂಡಲಗಾ ಕಾರಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಅಲ್ಲಿನ ಸಿಬ್ಬಂದಿ ಹಾಗೂ ಆತನೊಂದಿಗೆ ಸಂಪರ್ಕದಲ್ಲಿರುವ ಬೇರೆ ಕೈದಿಗಳಿಂದ ಆತನ ಕುರಿತು ಅಗತ್ಯ ಮಾಹಿತಿ ಪಡೆದುಕೊಂಡು ಮತ್ತೆ ಮಹಾರಾಷ್ಟ್ರದ ನಾಗ್ಪುರಕ್ಕೆ ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಉಗ್ರ ಪಾಷಾ ಜೊತೆ ಲಿಂಕ್ : ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದ ತನಿಖೆ ವೇಳೆ ಜಮ್ಮು- ಕಾಶ್ಮೀರದ ಲಷ್ಕರ್‌-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯೊಂದಿಗೆ ಜಯೇಶ ಪೂಜಾರಿ ಸಂಪರ್ಕದಲ್ಲಿದ್ದ ಹಾಗೂ ಬಂಧಿತನಾಗಿರುವ ಅಪರಾಧಿ ಪಾಷಾ ಜತೆ ಪೂಜಾರಿ ಸಂಪರ್ಕದಲ್ಲಿರುವ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ನಾಗ್ಪುರ ಪೊಲೀಸರು ತಿಳಿಸಿದ್ದಾರೆ. 2005ರಲ್ಲಿ ಬೆಂಗಳೂರಿನ ‘ಭಾರತೀಯ ವಿಜ್ಞಾನ ಸಂಸ್ಥೆ’ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲೂ ಪಾಷಾ ಭಾಗಿಯಾಗಿದ್ದ.

Last Updated : Jul 15, 2023, 10:26 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.