ETV Bharat / state

ಬೆಳಗಾವಿಯಲ್ಲಿ ಬಾಲಕಿ ಅಪಹರಣ ಯತ್ನ: ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿ ಪೊಲೀಸರ ಖೆಡ್ಡಾಕ್ಕೆ

ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಬೀಳಿಸಿದ್ದಾರೆ.

kidnapping-attempt-of-a-girl-in-belagavi
ಬೆಳಗಾವಿಯಲ್ಲಿ ಬಾಲಕಿ ಕಿಡ್ನಾಪ್ ಯತ್ನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ..!
author img

By

Published : Jul 12, 2023, 10:53 AM IST

Updated : Jul 12, 2023, 6:56 PM IST

ಸಿಸಿಟಿವಿ ದೃಶ್ಯ

ಬೆಳಗಾವಿ: ಅಪರಿಚಿತ ವ್ಯಕ್ತಿಯೋರ್ವ 12 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿ ಸಿಕ್ಕಿ ಬಿದ್ದಿರುವ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್ ಬಳಿ ಮಂಗಳವಾರ ಸಂಜೆ ನಡೆದಿದೆ. ಆರೋಪಿ ಬಾಲಕಿಯನ್ನು ಹೊತ್ತೊಯ್ಯುವ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಈ ಬಗ್ಗೆ ದೂರು ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಮಾರುತಿ ನಗರದ ಗಜಾನನ ಪಾಟೀಲ (40) ಖೆಡ್ಡಾಕ್ಕೆ ಬಿದ್ದ ಆರೋಪಿ.

ಆರೋಪಿ ಗಜಾನನ ಟ್ಯೂಶನ್​​ಗೆ ಹೊರಟಿದ್ದ ಬಾಲಕಿಗೆ ಚಾಕಲೇಟ್ ಆಮಿಷವೊಡ್ಡಿ ಹೆಗಲ ಎತ್ತಿಕೊಂಡು ಹೋಗಲು ಯತ್ನಿಸಿದ್ದನು. ಆತನ ಕೈಯಿಂದ ತಪ್ಪಿಸಿಕೊಳ್ಳಲು ಬಾಲಕಿ ಸಾಕಷ್ಟು ಪ್ರಯತ್ನ ಮಾಡಿದ್ದಳು. ಜೋರಾಗಿ ಚೀರಾಟ ಮಾಡಿದ್ದರಿಂದ ಸಮೀಪದ ಗಾರ್ಡನ್​ನಲ್ಲಿ ವಾಕಿಂಗ್​ ಮಾಡುತ್ತಿದ್ದ ಜನರು ನೋಡಿದ್ದಾರೆ. ತಕ್ಷಣ ಅವರು ರಕ್ಷಣೆಗೆ ಧಾವಿಸಿದ್ದು ಅಷ್ಟರಲ್ಲಿ ವ್ಯಕ್ತಿ ಬಾಲಕಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಸ್ಥಳೀಯರು ಪ್ರಯತ್ನಿಸಿದರೂ‌ ಸಾಧ್ಯವಾಗಿರಲಿಲ್ಲ.

ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, "ಸಂಜೆ 6.35ರ ಸುಮಾರಿಗೆ ಘಟನೆ ನಡೆದಿದೆ. ನಾವೆಲ್ಲ ಮಹಾವೀರ ಗಾರ್ಡನ್‌ನಲ್ಲಿ ವಾಕಿಂಗ್ ಮಾಡುತ್ತಿದ್ದೆವು. ಆಗ ಅಪರಿಚಿತ ವ್ಯಕ್ತಿಯೋರ್ವ ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿದ್ದ. ಅಲ್ಲಿದ್ದವರೆಲ್ಲ ಇದನ್ನು ನೋಡಿ ಆತನನ್ನು ಬೆದರಿಸಿದೆವು. ಆರೋಪಿ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾದ. ಘಟನೆಯಿಂದ ಈ ಪ್ರದೇಶದ ಜನರು ತುಂಬಾ ಭಯಭೀತಗೊಂಡಿದ್ದಾರೆ. ತಮ್ಮ ಮಕ್ಕಳಿಗೆ ರಕ್ಷಣೆ ನೀಡಬೇಕು. ಹಾಗಾಗಿ ಪೊಲೀಸರು ಆರೋಪಿಯನ್ನು ತಕ್ಷಣ ಬಂಧಿಸಬೇಕು" ಎಂದು ಒತ್ತಾಯಿಸಿದ್ದರು. ಬಾಲಕಿಯ ತಾಯಿಯು ಈ ಬಗ್ಗೆ ಟಿಳಕವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಸಿಸಿಟಿವಿ ಪರಿಶೀಲಿಸಿದಾಗ ಆರೋಪಿ ಬಾಲಕಿ ಹೊತ್ತೊಯ್ಯುತ್ತಿರುವ ದೃಶ್ಯ ಸೆರೆಯಾಗಿತ್ತು. ತಕ್ಷಣ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

ಉತ್ತರ ವಲಯ ಐಜಿಪಿ ವಿಕಾಸ್​ ಕುಮಾರ

''ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬಳ ಕಿಡ್ನಾಪ್‌ಗೆ ಯತ್ನ ನಡೆದಿತ್ತು. ಆ ಬಾಲಕಿ ವಿರೋಧಿಸಿ, ಕಿರುಚಾಡಿದ್ದರಿಂದ ಆರೋಪಿ ಬಾಲಕಿಯನ್ನು ಅಲ್ಲಿಯೇ ಬಿಟ್ಟು ಓಡಿ ಹೋಗಿದ್ದ. ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತ್ತೆಗಾಗಿ ಒಂದು ತಂಡ ರಚಿಸಲಾಗಿತ್ತು. ಬಾಲಕಿಯ ಕಿಡ್ನಾಪ್ ಪ್ರಕರಣ ದಾಖಲಾದ 12 ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಖೆಡ್ಡಾಕ್ಕೆ ಕೆಡವಲಾಗಿದೆ. ಮಾರ್ಕೆಟ್ ಠಾಣೆ ವ್ಯಾಪ್ತಿಯ ಖಡೇಬಜಾರ್‌ನಲ್ಲಿ ಗಜಾನನ ಪಾಟೀಲ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಉದ್ಯಮಭಾಗ ಠಾಣೆಯಲ್ಲಿ ಡೇಬಜಾರ್ ಎಸಿಪಿ ಅರುಣ್‌ಕುಮಾರ ಕೋಳೂರ ಅವರಿಂದ ಆರೋಪಿ ಗಜಾನನ ಪಾಟೀಲ ತೀವ್ರ ವಿಚಾರಣೆ ನಡೆಯುತ್ತಿದೆ. ಪ್ರಕರಣದ ತನಿಖಾಧಿಕಾರಿ ಹಾಗೂ ಉದ್ಯಮಭಾಗ ಠಾಣೆ ಪಿಐ ರಾಮಣ್ಣ ಬಿರಾದರ‌ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ'' ಎಂದು ಉತ್ತರ ವಲಯ ಐಜಿಪಿ ವಿಕಾಸ್​ ಕುಮಾರ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಮದ್ಯ ಸೇವನೆಗೆ ಹಣ ನೀಡುವಂತೆ ಪೀಡಿಸುತ್ತಿದ್ದ ಯುವಕನ ಹೊಡೆದು ಕೊಂದ ತಂದೆ, ಸಹೋದರ!

Last Updated : Jul 12, 2023, 6:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.