ETV Bharat / state

ಇ-ಪಾಸ್ ಇಲ್ಲದೇ ಅಕ್ರಮ ಪ್ರವೇಶ ಮಾಡಿದರೆ ಕ್ರಿಮಿನಲ್ ಮೊಕದ್ದಮೆ: ಬೆಳಗಾವಿ ಡಿಸಿ ಎಚ್ಚರಿಕೆ - ಬೆಳಗಾವಿ ಸುದ್ದಿ

ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನುಬಾಹಿರವಾಗಿರುತ್ತದೆ. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸ್ವಯಂಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

dc
dc
author img

By

Published : May 14, 2020, 3:09 PM IST

ಬೆಳಗಾವಿ: ಮಾರ್ಗಸೂಚಿ ಪ್ರಕಾರ ಸೇವಾಸಿಂಧು ಮೂಲಕ ಸೂಕ್ತ ಅನುಮತಿ ಪತ್ರ(ಇ-ಪಾಸ್‌) ಪಡೆಯದೇ ಕೆಲವರು ನೆರೆಯ ರಾಜ್ಯಗಳಿಂದ ಕಾನೂನುಬಾಹಿರವಾಗಿ ಅಡ್ಡಮಾರ್ಗದಲ್ಲಿ ಬೆಳಗಾವಿ ಜಿಲ್ಲೆ ಪ್ರವೇಶಿಸುತ್ತಿರುವುದು ಕಂಡುಬಂದಿದೆ. ಈ ರೀತಿ ಅಕ್ರಮವಾಗಿ ಪ್ರವೇಶಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಈ ರೀತಿ ಅಕ್ರಮವಾಗಿ ರಾಜ್ಯ ಪ್ರವೇಶಿಸುವುದು ಕಾನೂನುಬಾಹಿರವಾಗಿರುತ್ತದೆ. ಅಂತಹವರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಸೇವಾಸಿಂಧು ಮೂಲಕ ಇ-ಪಾಸ್ ಪಡೆಯದೇ ಮಹಾರಾಷ್ಟ್ರ ಸೇರಿದಂತೆ ಇತರೆ ನೆರೆಯ ರಾಜ್ಯಗಳ ಮೂಲಕ ಬೆಳಗಾವಿ ಜಿಲ್ಲೆಯನ್ನು ಯಾರಾದರೂ ಪ್ರವೇಶಿಸಿದ್ದರೆ ಅಂತಹವರು ಸ್ವಯಂಪ್ರೇರಣೆಯಿಂದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ, ಪರೀಕ್ಷೆಗೆ ಒಳಪಡಬೇಕು. ಇದೇ ರೀತಿ ಸಂಬಂಧಿಸಿದ ಪೊಲೀಸ್ ಠಾಣೆಗೂ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಈ ರೀತಿ ಅಕ್ರಮವಾಗಿ ಪ್ರವೇಶಿಸಿದವರು ಒಂದು ವೇಳೆ ಸ್ವಯಂಪ್ರೇರಣೆಯಿಂದ ಮುಂದೆ ಬಂದು ಮಾಹಿತಿ ನೀಡದಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಅನ್ಯ ರಾಜ್ಯಗಳಿಂದ ಅಕ್ರಮವಾಗಿ ಬಂದಿರುವವರ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಕೂಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಮ್ 0831-2407290 ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.