ಚಿಕ್ಕೋಡಿ: ಬಾವಿಯಲ್ಲಿ ಸಿಲುಕಿದ್ದ ಬೃಹದಾಕಾರದ ಮೊಸಳೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದಲ್ಲಿ ನಡೆದಿದೆ.
ಕೋಚರಿ ಗ್ರಾಮದ ರೈತ ರಾವಸಾಹೇಬ ಮಗದುಮ್ಮ ಎಂಬುವವರ ಹೊಲದಲ್ಲಿನ ಬಾವಿಗೆ ಕಳೆದ ಒಂದು ವಾರದ ಹಿಂದೆ ಆಹಾರ ಅರಸಿ ಹಿರಣ್ಯಕೇಶಿ ನದಿಯಿಂದ ಮೊಸಳೆಯೊಂದು ಬಂದು ಸೇರಿಕೊಂಡಿತ್ತು. ಈ ವಿಷಯವನ್ನು ಅರಣ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದಾಗ ಸ್ಥಳಕ್ಕೆ ಬಂದು ಮೊಸಳೆ ಸೆರೆ ಹಿಡಿಯಲು ಪ್ರಯತ್ನಿಸಿದ್ದರು. ಆದರೆ, ಸಿಬ್ಬಂದಿಗೆ ಮೊಸಳೆ ಮಾತ್ರ ಸಿಕ್ಕಿರಲಿಲ್ಲ. ಹೀಗಾಗಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು.
ಇದನ್ನೂ ಓದಿ: ಯಾವುದೇ ಲಾಕ್‌ಡೌನ್, ಕರ್ಫ್ಯೂ ಇಲ್ಲ, ಜನ ಆತಂಕ ಪಡುವ ಅಗತ್ಯ ಇಲ್ಲ : ಸಿಎಂ
ನಾಲ್ಕೈದು ದಿನಗಳವರೆಗೆ ನಿರಂತರ ಕಾರ್ಯಾಚರಣೆ ಮಾಡಿದ ಸಿಬ್ಬಂದಿ ಮೊಸಳೆಯನ್ನು ಸೆರೆ ಹಿಡಿದು ಸುರಕ್ಷಿತವಾಗಿ ನದಿಗೆ ಬಿಟ್ಟಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.