ಚಿಕ್ಕೋಡಿ (ಬೆಳಗಾವಿ): ಸಿಆರ್‌ಪಿಎಫ್ ಯೋಧ ಸಚಿನ್ ಸಾವಂತನಿಂದ ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಲಾಗ ಪೊಲೀಸ್ ಠಾಣೆಯಲ್ಲಿ ಯೋಧನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕೋಡಿ ಡಿವೈಎಸ್ಪಿ ಕಚೇರಿಗೆ ಸಿಆರ್‌ಪಿಎಫ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿಯವರ ಜೊತೆ ಚರ್ಚೆ ನಡೆಸಿದ್ದು, ಪೊಲೀಸರ ಮೇಲೆ ಯೋಧನಿಂದ ಹಲ್ಲೆ ಹಾಗೂ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ.