ETV Bharat / state

ನಿಪ್ಪಾಣಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ - ಹಣದ ವಿಚಾರಕ್ಕೆ ನಿಪ್ಪಾಣಿಯಲ್ಲಿ ವ್ಯಕ್ತಿಯ ಬರ್ಬರ ಹತ್ಯೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

cruel murder of a man in Nippani for money matters

author img

By

Published : Apr 4, 2022, 5:14 PM IST

ಚಿಕ್ಕೋಡಿ : ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಿಪ್ಪಾಣಿಯಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹತ್ಯೆಗೀಡಾಗಿರುವ ಅಭಿಷೇಕ ದತ್ತವಾಡೆ(22) ಮೂಲತಃ ಮಹರಾಷ್ಟ್ರ ನಿವಾಸಿ. ನಿಪ್ಪಾಣಿ ಪಟ್ಟಣದಲ್ಲಿ ತಾಯಿಯೊಂದಿಗೆ ಈತ ವಾಸವಿದ್ದ. ಕುಟುಂಬ ನಿರ್ವಹಣೆಗೆ ಖಾಸಗಿ ಚಿತ್ರಮಂದಿರದಲ್ಲಿ ಕೆಲಸ ಮಾಡುತಿದ್ದ. ಆದರೆ, ಯಾರೋ ದುಷ್ಕರ್ಮಿಗಳು ಅಭಿಷೇಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿ ಆಗಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಪ್ರತಿ ಪಕ್ಷಗಳಿಗೆ ಆಹ್ವಾನವಿತ್ತ ಅಧ್ಯಕ್ಷ

ಘಟನಾ ಸ್ಥಳಕ್ಕೆ ಈಗಾಗಲೇ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಣದ ವ್ಯವಹಾರಕ್ಕೆ ಯವಕನ ಕೊಲೆ ಆಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.