ಬೆಳಗಾವಿ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಲಗೌಡ ಪಾಟೀಲ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
ಗ್ಯಾಸ್ ಸೋರಿಕೆಯಾದ ಪರಿಣಾಮ ಸಿಲಿಂಡರ್ ಸ್ಫೋಟವಾಗಿದೆ ಎಂಬ ಮಾಹಿತಿ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಸಿಲಿಂಡರ್ ಬ್ಲಾಸ್ಟ್ ಆಗುತ್ತಿದಂತೆ ಮನೆಗೆ ಬೆಂಕಿ ತಗುಲಿದೆ. ಪರಿಣಾಮ ಅಪಾರ ಪ್ರಮಾಣದ ದವಸ ಧಾನ್ಯ, ವಸ್ತುಗಳು,ಬಟ್ಟೆ ಬೆಂಕಿಗೆ ಆಹುತಿಯಾಗಿವೆ.
ಸ್ಥಳಕ್ಕೆ ಹುಕ್ಕೇರಿ ಅಗ್ನಿಶಾಮಕ ಅಧಿಕಾರಿಗಳು ದೌಡಾಯಿಸಿ ಜಲವಾಹಕದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಯಮಕರಮಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್ನಿಂದ ಸಿಲಿಂಡರ್ ಸ್ಫೋಟ: ಮದ್ಯದ ನಶೆಯಲ್ಲಿ ಮಲಗಿದ್ದ ಯುವಕ ಸುಟ್ಟು ಕರಕಲು