ETV Bharat / state

ಪ್ರವಾಹಪೀಡಿತ ಪ್ರದೇಶಗಳಿಗೆ ಬೆಳಗಾವಿ ಡಿಸಿ ಭೇಟಿ; ನದಿ ಪಾತ್ರದ 99 ಕುಟುಂಬಗಳು  ಶಿಫ್ಟ್

author img

By

Published : Aug 17, 2020, 6:39 PM IST

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು.

DC Hirematt
DC Hirematt

ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ (ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು.
ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು ಬಿಡುಗಡೆಗಿಂತ ಮುಂಚೆ ನದಿ ತೀರದ ಜನರಿಗೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ಮುಂಚಿತವಾಗಿ ನೀಡಬೇಕು ಎಂದು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪರಿಹಾರ ಕೇಂದ್ರಗಳಿಗೆ ಭೇಟಿ: ಮಲಪ್ರಭಾ ನದಿ ತೀರದ ರಾಮದುರ್ಗ ತಾಲ್ಲೂಕಿನ ಹಿರೇ ಹಂಪಿ ಹೊಳಿ ಹಾಗೂ ಚಿಕ್ಕ ಹಂಪಿಹೊಳಿ ಗ್ರಾಮದ ಒಟ್ಟು 51 ಕುಟುಂಬಗಳನ್ನು ಮುಂಜಾಗ್ರತಾ ಕ್ರಮವಾಗಿ ಸುರೇಬಾನದ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಸುರೇಬಾನದ ಎಪಿಎಂಸಿ ಆವರಣದ ಕೇಂದ್ರದಲ್ಲಿ 12 ಕುಟುಂಬಗಳು ಮತ್ತು ಹೈಸ್ಕೂಲಿನಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರದಲ್ಲಿ 39 ಕುಟುಂಬಗಳಿಗೆ ಆಶ್ರಯ‌ ಕಲ್ಪಿಸಲಾಗಿರುತ್ತದೆ. ಈ ಕುಟುಂಬಗಳಿಗೆ ಊಟೋಪಹಾರ ಸೇರಿದಂತೆ ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳಲ್ಲಿ ಇರುವವರಿಗೆ ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಆಕ್ಸಿಮೀಟರ್ ಮತ್ತಿತರ ಅಗತ್ಯ ಉಪಕರಣ ನೀಡಲಾಗಿದ್ದು, ಪ್ರತಿ ಪರಿಹಾರ ಕೇಂದ್ರಕ್ಕೆ ವೈದ್ಯರ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಐದು‌ ಜನರ ಪ್ರತ್ಯೇಕ ತಂಡ ನಿಯೋಜಿಸಲಾಗಿದೆ ಎಂದು ಹೇಳಿದರು.

ಇದೇ ರೀತಿ ರಾಮದುರ್ಗ ತಾಲ್ಲೂಕಿನ ಗೊನ್ನಾಗರದಲ್ಲಿ ಕೂಡ ಪರಿಹಾರ ಕೇಂದ್ರಕ್ಕೂ ಭೇಟಿ ನೀಡಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು, ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಸದರಿ ಕೇಂದ್ರದಲ್ಲಿ 48 ಕುಟುಂಬಗಳ 200 ಕ್ಕೂ ಅಧಿಕ ಜನರು ಆಶ್ರಯ ಪಡೆದುಕೊಂಡಿದ್ದಾರೆ.
ಪರಿಹಾರ ಕೇಂದ್ರದಲ್ಲಿನ ವ್ಯವಸ್ಥೆಯ ಕುರಿತು ಗ್ರಾಮಸ್ಥರಿಂದಲೂ ಮಾಹಿತಿಯನ್ನು ಪಡೆದುಕೊಂಡರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.