ಬೆಳಗಾವಿ: ಕೋವಿಡ್ ಸಾಂಕ್ರಾಮಿಕ ರೋಗದ ಪ್ರಸರಣವನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ 7ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೇ.12ರ ರಾತ್ರಿ 9 ಗಂಟೆಯಿಂದ ಮೇ.24 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಆದರೆ, ಕೋವಿಡ್ ಪ್ರಕರಣಗಳಲ್ಲಿ ಪ್ರತಿ ದಿನ ಹೆಚ್ಚಳ ಕಂಡುಬರುತ್ತಿದ್ದು ಮೇ.24ರ ಬೆಳಿಗ್ಗೆ 6 ರವರೆಗೆ ಇರುವ ನಿಷೇಧಾಜ್ಞೆಯನ್ನು ಜೂ.7 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಈ ಅವಧಿಯಲ್ಲಿ ಅವಶ್ಯಕ ಚಟುವಟಿಕೆಗಳು ಹಾಗೂ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಮಿತಿಯಿಂದ ಪೂರ್ವಾನುಮತಿ ಪಡೆದುಕೊಂಡ ಚಟುವಟಿಕೆಗಳಿಗೆ ಮಾತ್ರ ಅವಕಾಶವಿದೆ. ಆದೇಶ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಮೂತ್ರ ಕುಡಿಸಿದ ಪ್ರಕರಣ ಸಿಐಡಿ ತನಿಖೆಗೆ: ಪಿಎಸ್ಐ ಅರ್ಜುನ್ ಅಮಾನತು