ETV Bharat / state

ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಸಕಲ ತಯಾರಿ: ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ - ವೀರರಾಣಿ ಚನ್ನಮ್ಮನ ವೀರಜ್ಯೋತಿ

ರಾಜ್ಯಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವ ಅ.23, 24 ಮತ್ತು 25ರಂದು ನಡೆಯಲಿದೆ.

Kittoor festival
ಚನ್ಮಮ್ಮನ ಕಿತ್ತೂರು ಉತ್ಸವದ ಪ್ರಚಾರ ಸಾಮಗ್ರಿ ಬಿಡುಗಡೆ
author img

By ETV Bharat Karnataka Team

Published : Oct 20, 2023, 7:30 PM IST

Updated : Oct 20, 2023, 8:03 PM IST

ಜಿಲ್ಲಾಧಿಕಾರಿ ನಿತೇಶ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೆಳಗಾವಿ: ಅಕ್ಟೋಬರ್ 23, 24 ಮತ್ತು 25ರಂದು ಮೂರು ದಿನ ರಾಜ್ಯ ಮಟ್ಟದ ಕಿತ್ತೂರು ಉತ್ಸವದ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಡಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸುವಂತೆ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿವಿಧ ಸಾಹಿತ್ಯಿಕ‌, ಸಾಂಸ್ಕೃತಿಕ‌ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸ್ಥಳೀಯ ಕಲಾ ತಂಡಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿವೆ. ಆಸನ, ಊಟದ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಮೈಸೂರು ದಸರಾ ಮಾದರಿಯಲ್ಲಿ ಉತ್ಸವ ಆಚರಣೆ ತಯಾರಿ ಮಾಡಿಕೊಳ್ಳಲಾಗಿದೆ. ರಾಜ್ಯಾದ್ಯಂತ ಸಂಚರಿಸಿದ ವೀರರಾಣಿ ಚನ್ನಮ್ಮನ ವೀರಜ್ಯೋತಿಗೆ ಮುಖ್ಯಮಂತ್ರಿಗಳು ಬೆಂಗಳೂರು ವಿಧಾನಸೌಧದ ಆವರಣದಲ್ಲಿ ಅಕ್ಟೋಬರ್ 13 ರಂದು ಚಾಲನೆ ನೀಡಿದ್ದರು. ಪ್ರತಿ ವರ್ಷದಂತೆ ಕಿತ್ತೂರು ಕೋಟೆ ಆವರಣದಲ್ಲಿ ಅ.23 ರಿಂದ 25 ರ ವರೆಗೆ ವಿವಿಧ ಕಾರ್ಯಕ್ರಮ ಆಯೋಜಿಸುವ ಮೂಲಕ ಉತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಎಂದು ಹೇಳಿದರು.

ಉತ್ಸವ ಉದ್ಘಾಟನೆ: ಕಿತ್ತೂರು ಉತ್ಸವದ ಉದ್ಘಾಟನಾ ಧ್ವಜಾರೋಹಣವನ್ನು ಉತ್ಸವ ಸಮಿತಿ ಅಧ್ಯಕ್ಷನಾಗಿರುವ ನಾನು ನೆರವೇರಿಸಲಿದ್ದೇನೆ ಎಂದು ತಿಳಿಸಿದ ಜಿಲ್ಲಾಧಿಕಾರಿ, ವಿಜಯಜ್ಯೋತಿಗೆ ಸ್ವಾಗತ ಹಾಗೂ ಸಂಸ್ಥಾನದ ಧ್ವಜಾರೋಹಣ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸುವರು. ಜಾನಪದ ಕಲಾವಾಹಿನಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡುವರು. ಫಲ-ಪುಷ್ಪ ಪ್ರದರ್ಶನಕ್ಕೆ ಸಂಸದೆ ಮಂಗಲ ಅಂಗಡಿ ಚಾಲನೆ ನೀಡುವರು. ವಸ್ತು ಪ್ರದರ್ಶನ ಮಳಿಗೆಗಳನ್ನು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಉದ್ಘಾಟಿಸುವರು. ಕ್ರೀಡೆ ಮತ್ತು ವಿಹಾರಕ್ಕೆ ವಿಧಾನಸಭೆಯ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಚಾಲನೆ ನೀಡಲಿದ್ದು, ಈ ವೇಳೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉಪಸ್ಥಿತಿ ಇರುವರು ಎಂದರು.

ಉತ್ಸವಕ್ಕೆ ₹2 ಕೋಟಿ ಅನುದಾನ: ಸರ್ಕಾರ ಈಗಾಗಲೇ ಉತ್ಸವಕ್ಕೆ 2 ಕೋಟಿ ರೂ ಅನುದಾನ ಬಿಡುಗಡೆ ಮಾಡಿದೆ. ಯಾವುದೇ ರೀತಿಯಲ್ಲಿ ಅನುದಾನದ ಕೊರತೆಯಾಗಿಲ್ಲ. ಕ್ರೀಡೆ, ಮನರಂಜನೆ, ವಿಚಾರ ಸಂಕೀರ್ಣ, ಫಲ ಪುಷ್ಪ ಪ್ರದರ್ಶನ ಸೇರಿದಂತೆ ಎಲ್ಲ ಕಾರ್ಯಕ್ರಮಗಳ ಆಯೋಜನೆಗೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ರಾಜ್ಯ ಮಟ್ಟದ ಪ್ರಶಸ್ತಿ ವಿಜೇತರು, ಅಂತರರಾಷ್ಟ್ರೀಯ ಕಲಾವಿದರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮೊದಲ ದಿನ ಸಂಚಿತ್ ಹೆಗಡೆ ಮತ್ತು ತಂಡ, ಎರಡನೇ ದಿನ ಶಮಿತಾ ಮಲ್ನಾಡ್ ಮತ್ತು ತಂಡ ಸಂಗೀತ ಕಾರ್ಯಕ್ರಮ ನೀಡಲಿದೆ. ಕೊನೆಯ ದಿನ ಸಮಾರೋಪ ಸಮಾರಂಭದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಮತ್ತು ತಂಡದ 30 ಸದಸ್ಯರು ಕಾರ್ಯಕ್ರಮ ನಡೆಸಿಕೊಡುವರು.

ಚಿತ್ರನಟ ರಮೇಶ್ ಅರವಿಂದ್ ಆಗಮಿಸುವರು. ದಂಗಲ್ ಮಾದರಿಯಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ. 35 ಸಾವಿರ ಜನ ಪಂದ್ಯ ವೀಕ್ಷಣೆಗೆ ಆಗಮಿಸಲಿದ್ದಾರೆ‌. ಕಳೆದ ಬಾರಿಯಂತೆ ಕಲಾವಿದರಿಗೆ ಆನ್‌ಲೈನ್ ಮೂಲಕ ವೇತನ ಪಾವತಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮೂರು ವೇದಿಕೆಯಲ್ಲಿ ವಿವಿಧ ಕಾರ್ಯಕ್ರಮ: ಕೋಟೆ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವೇದಿಕೆ, ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸರದಾರ ಗುರುಸಿದ್ಧಪ್ಪ ವೇದಿಕೆ, ಕಲ್ಮಠ ಆವರಣ ಸಭಾಭವನದಲ್ಲಿ ವಡ್ಡರ ಯಲ್ಲಣ್ಣ ವೇದಿಕೆಗಳಲ್ಲಿ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ವಿಚಾರಗೋಷ್ಠಿಗಳು ನಡೆಯಲಿವೆ. ಮ್ಯಾರಥಾನ್ ಓಟ, ಕಬಡ್ಡಿ, ವಾಲಿಬಾಲ್, ಕುಸ್ತಿ ಮತ್ತು ಸೈಕ್ಲಿಂಗ್ ಸ್ಪರ್ಧೆ ನಡೆಯಲಿವೆ ಎಂದರು.

ಶಾಸಕ ಶಾಸಕ ಆಸೀಫ್ ಸೇಠ್, ಮೇಯರ್ ಶೋಭಾ ಸೋಮನ್ನಾಚೆ, ಉಪ ಮೇಯರ್ ರೇಷ್ಮಾ ಪಾಟೀಲ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ಮತ್ತಿತರ ಅಧಿಕಾರಿಗಳು ಇದ್ದರು.

ಇದನ್ನೂಓದಿ: ಆಕರ್ಷಕ ದೀಪಾಲಂಕಾರದಿಂದ ಮೈಸೂರು ನಗರ ಝಗಮಗ-ವಿಡಿಯೋ

Last Updated : Oct 20, 2023, 8:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.