ETV Bharat / state

ವಿದೇಶಗಳಲ್ಲಿರುವ ಬೆಳಗಾವಿ ನಿವಾಸಿಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮನವಿ

ಕೋವಿಡ್-19 ಹರಡದಂತೆ ತಡೆಗಟ್ಟುವಿಕೆ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವುದಕ್ಕೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ವದೇಶಕ್ಕೆ ಆಗಮಿಸುವವರ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

DC,  Bommanahalli
ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ
author img

By

Published : Mar 18, 2020, 1:10 PM IST

ಬೆಳಗಾವಿ: ಜಿಲ್ಲೆಯ ನಿವಾಸಿಗಳು ಯಾರಾದರೂ ಉದ್ಯೋಗ, ಶಿಕ್ಷಣ ಸೇರಿದಂತೆ ಮತ್ತಿತರ ಕಾರಣಗಳಿಂದ ವಿದೇಶಗಳಲ್ಲಿ ವಾಸಿಸುತ್ತಿದ್ದರೆ, ಅಥವಾ ಸದ್ಯದಲ್ಲಿ ದೇಶಕ್ಕೆ ವಾಪಸಾಗುತ್ತಿದ್ದರೆ ಅಂತಹವರ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಕೋರಿದ್ದಾರೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಕೋವಿಡ್-19 ಹರಡದಂತೆ ತಡೆಗಟ್ಟುವಿಕೆ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳುವುದಕ್ಕೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಸ್ವದೇಶಕ್ಕೆ ಆಗಮಿಸುವವರ ಬಗ್ಗೆ ಜಿಲ್ಲಾಧಿಕಾರಿ ಕಚೇರಿ ಅಥವಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಮಾಹಿತಿಯನ್ನು ಒದಗಿಸಬಹುದು ಎಂದು ತಿಳಿಸಿದ್ದಾರೆ.

ಇದರ ಜೊತೆಗೆ ದೂರವಾಣಿ ಸಂಖ್ಯೆ 0831-2424284 ಗೆ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.