ETV Bharat / state

ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್​ ಕಾಲೇಜ್​​ ಸಾಧನೆಗೆ ಡಿಸಿಎಂ ಅಶ್ವತ್ಥ ನಾರಾಯಣ ಮೆಚ್ಚುಗೆ - Belagavi latest news

ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಗಳಿಸುತ್ತಿರುವ ಬೆಳಗಾವಿಯ ಸರ್ಕಾರಿ ಪಾಲಿಟೆಕ್ನಿಕ್ ಸಾಧನೆಗೆ ಡಿಸಿಎಂ ಡಾ. ಅಶ್ವತ್ಥ ನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

DCM Ashwath Narayan visited Government polytechnic college
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ ಭೇಟಿ‌ ನೀಡಿದ ಡಿಸಿಎಂ
author img

By

Published : Nov 24, 2020, 9:30 PM IST

ಬೆಳಗಾವಿ: ಕೋವಿಡ್-19 ಸಂದರ್ಭದಲ್ಲಿಯೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ. 100ಕ್ಕೆ ನೂರರಷ್ಟು ಪ್ರವೇಶ ಮತ್ತು ಹಲವು ವರ್ಷಗಳಿಂದ ಉತ್ತಮ ಫಲಿತಾಂಶ ಗಳಿಸುತ್ತಿರುವ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಾಧನೆಯ ಬಗ್ಗೆ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಮಂಗಳವಾರ ಭೇಟಿ‌ ನೀಡಿದ ಅವರು, ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಜತೆ ಚರ್ಚೆ ನಡೆಸಿದರು. ಪ್ರತಿ ವರ್ಷ ಅತ್ಯುತ್ತಮ ಫಲಿತಾಂಶ ಗಳಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ(ಪ್ಲೇಸ್​ಮೆಂಟ್) ಕಲ್ಪಿಸುವಲ್ಲಿಯೂ ಉತ್ತಮ ಸಾಧನೆಗೈದಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಕಟ್ಟಡ ನವೀಕರಣ-ಪ್ರಸ್ತಾವ ಸಲ್ಲಿಕೆಗೆ‌ ಸೂಚನೆ:

ಬೆಳಗಾವಿಯಲ್ಲಿ ನಿರಂತರ ಮಳೆ ಹಾಗೂ ತಂಪು‌ ವಾತಾವರಣದಿಂದ ಕಳೆಗುಂದಿರುವ ಕಾಲೇಜು ಕಟ್ಟಡ ನವೀಕರಣ ಹಾಗೂ ಕ್ಯಾಂಟೀನ್ ನಿರ್ಮಾಣದ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಪ್ರಾಚಾರ್ಯ ವೈ.ಎನ್.ದೊಡ್ಡಮನಿ ಸಚಿವರ ಗಮನಕ್ಕೆ ತಂದರು.

ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಡಿಸಿಎಂ ಡಾ. ಅಶ್ವತ್ಥ ನಾರಾಯಣ, ಸ್ಥಳೀಯ ಶಾಸಕರಾದ ಅನಿಲ್ ಬೆನಕೆ ಅವರ ಜತೆ ಸಮಗ್ರವಾಗಿ ಚರ್ಚಿಸಿದ ಬಳಿಕ ನವೀಕರಣಕ್ಕೆ ಪ್ರಸ್ತಾವ ಕಳಿಸುವಂತೆ ಸೂಚನೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.