ಅಥಣಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಅಥಣಿ ಪಟ್ಟಣದ ಬಡ ಕುಟುಂಬಗಳ ನೆರವಿಗೆ ಡಿಸಿಎಂ ಲಕ್ಷ್ಮಣ ಸವದಿ ಮುಂದಾಗಿದ್ದಾರೆ. ಅಥಣಿ ಪಟ್ಟಣದಲ್ಲಿ ಸತ್ಯ ಸಂಗಮ ಗ್ರಾಮ ವಿಕಾಸ್ ಪ್ರತಿಷ್ಠಾನ ಸಂಘಟನೆಯ ವತಿಯಿಂದ 25 ಸಾವಿರ ಬಡ ಕುಟುಂಬಗಳಿಗೆ ತಲಾ 5 ಕೆಜಿ ಜೋಳ, 5 ಕೆಜಿ ಗೋಧಿ ಪೊಟ್ಟಣಗಳನ್ನು ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಅಥಣಿ ಪಟ್ಟಣದಲ್ಲಿ ನ್ಯಾಯಬೆಲೆ ಅಂಗಡಿ ಅನುಸಾರ, ಬಿಪಿಎಲ್ ಹಾಗೂ ಇತರೆ ಜನಸಾಮಾನ್ಯರಿಗೂ ಡಿಸಿಎಂ ಪುತ್ರ ಚಿದಾನಂದ ಸವದಿ ಹಾಗೂ ಸುಮೀತ್ ಸವದಿ ಆಹಾರ ಧಾನ್ಯಗಳ ಕಿಟ್ಗಳನ್ನು ವಿತರಣೆ ಮಾಡುತ್ತಿದ್ದಾರೆ. ಅಲ್ಲದೆ ಆರೋಗ್ಯದ ದೃಷ್ಟಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.