ETV Bharat / state

ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ: ಡಿ.ಕೆ.ಶಿವಕುಮಾರ್

author img

By ETV Bharat Karnataka Team

Published : Dec 15, 2023, 6:27 PM IST

ಬಿಜೆಪಿಯವರಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

dcm-dk-shivakumar-criticized-bjp-in-belagavi
ಬಿಜೆಪಿಗೆ ರಾಜಕೀಯ ಮುಖ್ಯವೇ ಹೊರತು ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಯಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು/ಬೆಳಗಾವಿ: "ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಸುವರ್ಣಸೌಧದ ಆವರಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಇಂದು ಮುಖ್ಯಮಂತ್ರಿಗಳು ಉತ್ತರ ಕರ್ನಾಟಕದ ವಿಷಯಗಳನ್ನು ಪ್ರಸ್ತಾಪಿಸಿ, ಉತ್ತರ ಕೊಡಲಿದ್ದಾರೆ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ?. ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ" ಎಂದರು.

ಭೋಜನಕೂಟದಲ್ಲಿ ಅನ್ಯ ಪಕ್ಷಗಳ ಶಾಸಕರು ಭಾಗಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿ, "ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ ಏನೇ ಭಿನ್ನಾಭಿಪ್ರಾಯವಿದ್ದರೂ ಮನುಷ್ಯರ ನಡುವಣ ಬಾಂಧವ್ಯ ಮುಖ್ಯವಾದುದ್ದು. ಸದನದ ಕಲಾಪ ಸಮಯದಲ್ಲೂ ಕೆಲವು ವಿಚಾರಗಳ ಚರ್ಚೆಗೆ ಸಭೆ ಕರೆದಾಗ ವಿರೋಧ ಪಕ್ಷಗಳ ನಾಯಕರನ್ನೂ ಆಹ್ವಾನಿಸುತ್ತೇವೆ. ರಾಜಕೀಯ ಮಾಡಲು ಬಯಸುವವರು ಸಭೆಗೆ ಬರುವುದಿಲ್ಲ. ನಾವು ಸಹಜವಾಗಿ ಭೋಜನ ಕೂಟಕ್ಕೆ ಎಲ್ಲಾ ಶಾಸಕರನ್ನು ಆಹ್ವಾನಿಸುತ್ತೇವೆ. ಕೆಲವರು ಬರುತ್ತಾರೆ, ಕೆಲವರು ನಿರಾಕರಿಸುತ್ತಾರೆ. ನಮಗೆ ಆತ್ಮೀಯರಾಗಿರುವವರನ್ನು ನಾವು ಕರೆಯುತ್ತೇವೆ. ಅದರಲ್ಲಿ ತಪ್ಪೇನಿದೆ?" ಎಂದು ಹೇಳಿದರು.

ಶಾಸಕ ಪ್ರಸಾದ್ ಅಬ್ಬಯ್ಯ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಪ್ರಸ್ತಾಪ ಮಾಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಡಿಕೆಶಿ ನಿರಾಕರಿಸಿದರು.

ಸೋಮಶೇಖರ್​ ಅವರಿಂದ ಮಾಹಿತಿ ಪಡೆದ ಅಶೋಕ್: ಮತ್ತೊಂದೆಡೆ, ಡಿಸಿಎಂ ಶಿವಕುಮಾರ್ ಆಯೋಜಿಸಿದ್ದ ಭೋಜನಕೂಟದಲ್ಲಿ ಹಾಜರಾಗಿದ್ದ ಶಾಸಕ ಎಸ್.ಟಿ.ಸೋಮಶೇಖರ್ ಅವರನ್ನು ತಮ್ಮ ವಿಧಾನಸಭೆ ಕೊಠಡಿಗೆ ಕರೆದೊಯ್ದ ವಿಪಕ್ಷನಾಯಕ ಆರ್.ಅಶೋಕ್ ಮಾಹಿತಿ ಪಡೆದುಕೊಂಡಿದ್ದರು. ಬೆಳಗಾವಿ ನಗರ ಹೊರವಲಯದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ವೇಳೆ ಎಸ್.ಟಿ.ಸೋಮಶೇಖರ್, ಶಿವರಾಂ ಹೆಬ್ಬಾರ್ ಕಾಣಿಸಿಕೊಂಡಿದ್ದು ಬಿಜೆಪಿಗೆ ಮುಜುಗರ ಉಂಟು ಮಾಡಿತ್ತು. ಈ ಬಗ್ಗೆ ಸೋಮಶೇಖರ್ ಜತೆ ಮಾತನಾಡುವುದಾಗಿ ಹೇಳಿದ್ದ ಅಶೋಕ್, ನಿನ್ನೆ ಸಂಜೆ ಸೋಮಶೇಖರ್​ ಅವರನ್ನು ತಮ್ಮ ವಿಧಾನಸಭೆ ಕೊಠಡಿಗೆ ಕರೆದುಕೊಂಡು ಹೋಗಿ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಪ್ರಕರಣ: ಬಿಜೆಪಿಯಿಂದ ನಿಲುವಳಿ ಸೂಚನೆ, ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.