ETV Bharat / state

ದೆಹಲಿ ಪ್ರವಾಸ ಮುಗಿಸಿ ಬಂದ ಸವದಿ: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಹಿಂದೇಟು - Delhi tour

ದೆಹಲಿ ಪ್ರವಾಸ ಕೈಗೊಂಡು ಸಖತ್ ಸುದ್ದಿಯಾಗಿದ್ದ ಡಿಸಿಎಂ ಲಕ್ಷ್ಮಣ ಸವದಿ ವಾಪಸ್​ ಬಂದಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ದೆಹಲಿ ಪ್ರವಾಸ ಮುಗಿಸಿ ಬಂದ ಸವದಿ
ದೆಹಲಿ ಪ್ರವಾಸ ಮುಗಿಸಿ ಬಂದ ಸವದಿ
author img

By

Published : Jul 31, 2020, 6:58 PM IST

Updated : Jul 31, 2020, 7:24 PM IST

ಬೆಳಗಾವಿ: ಸರ್ಕಾರ ಒಂದು ವರ್ಷ ಪೂರೈಸಿದ ದಿನದಂದೇ ದೆಹಲಿ ಪ್ರವಾಸ ಕೈಗೊಂಡು ಸುದ್ದಿಯಾಗಿದ್ದ ಡಿಸಿಎಂ ಲಕ್ಷ್ಮಣ ಸವದಿ ಏಕಾಏಕಿ ಮೌನಕ್ಕೆ ಶರಣಾಗಿದ್ದಾರೆ.

ದೆಹಲಿ ಪ್ರವಾಸ ಮುಗಿಸಿ ಬಂದ ಸವದಿ

ಸಂಜೆ ಬೆಂಗಳೂರಿನಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸವದಿಯವರಿಗೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳಲು ಮುಂದಾದರು. ಈ ವೇಳೆ ಅವರು ಕೈಮುಗಿದು ಬೆಳಗಾವಿಯ ಸದಾಶಿವ ನಗರದ ನಿವಾಸಕ್ಕೆ ತೆರಳಿದರು.

ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ಹಿನ್ನೆಲೆಯಲ್ಲಿ ಸಚಿವರು ಪ್ರತಿಕ್ರಿಯೆಗೆ ಹಿಂದೇಟು ಹಾಕಿದ್ದಾರೆ ಎನ್ನಲಾಗುತ್ತಿದೆ. ಕೇಂದ್ರ ಸಚಿವ ಸುರೇಶ ಅಂಗಡಿ, ಸಚಿವ ಜಗದೀಶ್ ಶೆಟ್ಟರ್ ಬೆಂಗಳೂರಿನಿಂದ ಒಂದೇ ವಿಮಾನದಲ್ಲಿ ಆಗಮಿಸಿದ್ದರು.

Last Updated : Jul 31, 2020, 7:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.