ಅಥಣಿ : ಗ್ರಾಮ ಪಂಚಾಯತ್ ಚುನಾವಣೆಗೆ 2ನೇ ಹಂತದ ಮತದಾನ ಹಿನ್ನೆಲೆ ಅಥಣಿ ತಾಲೂಕಿನ ಪಿಕೆ ನಾಗನೂರ ಗ್ರಾಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಹಕ್ಕು ಚಲಾವಣೆ ಮಾಡಿದ್ರು. ಮತ ಕೇಂದ್ರಕ್ಕೆ ಖಾಸಗಿ ವಾಹನದಲ್ಲಿ ಆಗಮಿಸಿದ ಡಿಸಿಎಂ, ಕೊರೊನಾ ನಿಯಮಾವಳಿಗಳ ಅನ್ವಯ ಆರೋಗ್ಯ ಸಿಬ್ಬಂದಿ ದೇಹದ ಉಷ್ಣತೆ ಪರಿಶೀಲಿಸಿದ ನಂತರ ಮತದಾನಕ್ಕೆ ತೆರಳಿದ್ರು.
ಬಳಿಕ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಹಕ್ಕು. ದಯವಿಟ್ಟು ನಾಡಿನ ಜನರು ಗ್ರಾಪಂ ಚುನಾವಣೆಯಲ್ಲಿ ಮತ ಚಲಾವಣೆ ಮಾಡಿ ಎಂದು ಸವದಿ ಕರೆ ನೀಡಿದ್ರು.
ಕೇಂದ್ರ ಸಚಿವ ಅಮಿತ್ ಶಾ, ಕೇಂದ್ರದ ಹಲವು ಯೋಜನೆಗಳನ್ನು ಜಾರಿ ಮಾಡಲು ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಹೇಳಿದ್ರು. ಮಕರ ಸಂಕ್ರಾಂತಿ ಹಬ್ಬದ ನಂತರ ರಾಜ್ಯದಲ್ಲಿ ಉತ್ತರಾಯಣ ಪ್ರಾರಂಭವಾಗುತ್ತದೆ ಎಂಬ ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ವಿಚಾರ.
ದೇಶದಲ್ಲಿ ಪ್ರತಿಯೊಬ್ಬರಿಗೆ ಮಾತಾಡುವ ಹಕ್ಕಿದೆ, ನಾನು ಅದಕ್ಕೆ ಪ್ರತಿಕ್ರಿಯಿಸಲ್ಲ ಎಂದರು. ಸಚಿವ ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ, ಅವರ ಯಾವುದೇ ತೀರ್ಮಾನಕ್ಕೆ ನಾವು ಬದ್ಧ ಎಂದು ತಿಳಿಸಿದ್ರು.