ಅಥಣಿ(ಬೆಳಗಾವಿ): ಅಥಣಿ ತಾಲೂಕಿನಲ್ಲಿ ಕೊರೊನಾ ಅಬ್ಬರ ಹೆಚ್ಚಾಗಿದ್ದು, ದಿಢೀರನೆ ಡಿಸಿಎಂ ಲಕ್ಷ್ಮಣ ಸವದಿಯವರು ಅಥಣಿ ತಾಲೂಕಿನ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.
ಸಿಬ್ಬಂದಿಗೆ ಯಾವುದೇ ಮಾಹಿತಿ ನೀಡದೆ ಡಿಸಿಎಂ ಆಸ್ಪತ್ರೆಗೆ ವಿಶೇಷ ಭೇಟಿ ನೀಡಿದರು. ಭೇಟಿ ನೀಡಿದ ಸಂದರ್ಭದಲ್ಲಿ ಕೆಲವು ವೈದ್ಯರು ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆಂದು ಆರೋಪಗಳು ಕೇಳಿ ಬರುತ್ತಿದೆ. ಈ ಸಮಯದಲ್ಲಿ ಏನಾದರೂ ಕಂಡು ಬಂದರೆ ಅವರ ಮೇಲೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸವದಿ ಎಚ್ಚರಿಸಿದರು.
ವೈದ್ಯರಿಗೆ, ವೈದ್ಯಾಧಿಕಾರಿಗಳಿಗೆ ಹೊಂದಾಣಿಕೆ ಇಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ ಯಾಕೆ ಹೀಗೆ ಎಂದು ಅಧಿಕಾರಿಗಳನ್ನು ಪ್ರಶ್ನೆ ಮಾಡಿದರು. ಯಾವುದೇ ರೋಗಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಆಕ್ಸಿಜನ್ ಪ್ಲಾಂಟ್ಗೆ ಭೇಟಿ ನೀಡಿ ಪರಿಶೀಲನೆ ಪಡೆದು ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರಿಗೆ ಹಾಗೂ ಹೊರ ರೋಗಿಗಳಿಗೆ, ಗರ್ಭಿಣಿ ಮಹಿಳೆಯರಿಗೆ ಯಾವುದೇ ತೊಂದರೆಯಾಗದಂತೆ, ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುವಂತೆ ವೈದ್ಯರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿ, ಕೆಲವು ಕಡೆ ಆಕ್ಸಿಜನ್ ಕೊರತೆ ಕಂಡುಬರುತ್ತಿದೆ. ನಾಳೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಸಭೆಯಲ್ಲಿ ಯಾವ ರೀತಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಚರ್ಚೆ ಮಾಡಲಾಗುವುದೆಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.
ಇದನ್ನೂ ಓದಿ: ನೀನೇ 'ಭಗವಂತ'ನೆಂದು ಕಾಲಿಗೆರಗಿ 'ಶರಣು' ಎಂದ ಸಲಗಾರ.. ಶಿಕ್ಷಕನೊಬ್ಬ ಬಸವಕಲ್ಯಾಣಕ್ಕೆ ಶಾಸಕನಾದ..