ETV Bharat / state

ಜಾರ್ಖಂಡ್, ಮಧ್ಯಪ್ರದೇಶ ಕಾರ್ಮಿಕರನ್ನು ಭೇಟಿ ಮಾಡಿದ ಡಿಸಿಎಂ ಸವದಿ

ನಗರದಲ್ಲಿ ಕಟ್ಟಡ ಕೆಲಸ ಮಾಡುತಿದ್ದ ಜಾರ್ಖಂಡ್ ಮತ್ತು ಮಧ್ಯಪ್ರದೇಶ ರಾಜ್ಯಗಳ ಮೂಲದ ಕಾರ್ಮಿಕರು ತಾಲೂಕಿನ ಸಂಕ್ರಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸವಾಗಿದ್ದಾರೆ. ಸುಮಾರು ಮೂವತ್ತು ಕಾರ್ಮಿಕರನ್ನು ಭೇಟಿ ಮಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಅವರ ಆರೋಗ್ಯ ವಿಚಾರಿಸಿದರು.

author img

By

Published : May 16, 2020, 8:41 PM IST

DCM Lakshmana Sawadi
ಜಾರ್ಖಂಡ್ ಮೂಲದ ಕಾರ್ಮಿಕರನ್ನ ಭೇಟಿ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ

ಅಥಣಿ: ತಾಲೂಕಿನ ಸಂಕ್ರಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸವಿರುವ ಜಾರ್ಖಂಡ್ ಹಾಗೂ ಮಧ್ಯಪ್ರದೇಶದ ಕಾರ್ಮಿಕರನ್ನು ಭೇಟಿ ಮಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಅವರ ಆರೋಗ್ಯ ವಿಚಾರಿಸಿದರು.

ನಗರದಲ್ಲಿ ಕಟ್ಟಡ ಕೆಲಸ ಮಾಡುತಿದ್ದ ಹೊರ ರಾಜ್ಯಗಳ ಸುಮಾರು ಮೂವತ್ತು ಕಾರ್ಮಿಕರು ತಾಲೂಕಿನ ಶೇಗುಣಸಿ ಗ್ರಾಮದ ಹೊರವಲಯದಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಗ್ರಾಮಸ್ಥರು ಅವರ ಮೂಲ ವಿಚಾರಿಸಿದಾಗ ಜಾರ್ಖಂಡ್ ಹಾಗೂ ಮಧ್ಯ ಪ್ರದೇಶದವರು ಎಂಬುದು ತಿಳಿದು ಬಂದಿದೆ. ತಕ್ಷಣವೇ ತಾಲೂಕು ಆಡಳಿತದ ಗಮನಕ್ಕೆ ತಂದು ಅವರನ್ನು ಸಮೀಪದ ಸಂಕ್ರಟ್ಟಿ ಸರ್ಕಾರಿ ಶಾಲೆಯಲ್ಲಿ ತಾತ್ಕಾಲಿಕ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಯಿತು.

ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅವರಿಂದ ಇತರ ಮಾಹಿತಿ ಸಂಗ್ರಹಿಸಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಮೇಲ್ನೋಟಕ್ಕೆ ಯಾವುದೇ ತೊಂದರೆ ಕಾಣಿಸಿಕೊಂಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಅಧಿಕಾರಿ ಕೃಷ್ಣ ಸತ್ತಿಗೇರಿ ದೂರವಾಣಿ ಮೂಲಕ ಈಟಿವಿ ಭಾರತಕ್ಕೆ ತಿಳಿಸಿದರು.

ವಿಷಯ ತಿಳಿದು ಡಿಸಿಎಂ ಲಕ್ಷ್ಮಣ್ ಸವದಿ ಸಂಕ್ರಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಅವರಿಗೆ ಪೌಷ್ಟಿಕ ಆಹಾರ ನೀಡುವಂತೆ ಮತ್ತು ಊರುಗಳಿಗೆ ಹೋಗುವುದಕ್ಕೆ ವ್ಯವಸ್ಥೆ ಮಾಡಿ ಎಂದು ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.