ETV Bharat / state

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಿ ಡಿಸಿಎಂ ಸವದಿ

author img

By

Published : Jul 2, 2020, 10:39 AM IST

ಕೊರೊನಾ ವೈರಸ್ ಹರಡದಂತೆ ತಡೆಯಲು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಪೌರಕಾರ್ಮಿಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಬಹಳ ಶ್ರಮಪಟ್ಟಿದ್ದಾರೆ. ಅದರಲ್ಲೂ ವಿಶೇಷವಾಗಿ ಆಶಾ ಕಾರ್ಯಕರ್ತೆಯರು ದೇಶದ ಹಿತಕ್ಕಾಗಿ ಲಾಕ್‌ಡೌನ್ ಸಂದರ್ಭದಲ್ಲಿ ಅವಿರತವಾಗಿ ಕೆಲಸ ನಿರ್ವಹಿಸಿದ್ದು ಶ್ಲಾಘನೀಯ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದ್ದಾರೆ.

DCM Laxman Savadi
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಿದ ಡಿಸಿಎಂ ಲಕ್ಷ್ಮಣ್ ಸವದಿ

ಅಥಣಿ: ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್​ ಅನ್ನು ಡಿಸಿಎಂ ಲಕ್ಷ್ಮಣ್ ಸವದಿ ವಿತರಿಸಿದರು.

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಿ ಡಿಸಿಎಂ ಸವದಿ

ನಗರದ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಒಂದು ಕಾಲದಲ್ಲಿ ಆಶಾ ಕಾರ್ಯಕರ್ತರನ್ನು ತುಂಬಾ ಕೀಳುಭಾವದಿಂದ ನೋಡುತ್ತಿದ್ದರು. ಈಗ ಕಾಲ ಬದಲಾಗಿದೆ. ಕೊರೊನಾದಂತಹ ಸಂಕಷ್ಟದ ಸ್ಥಿತಿಯನ್ನು ಎದುರಿಸಿ ಜೀವದ ಹಂಗು ತೊರೆದು ಕುಟುಂಬದ ತೊಂದರೆಗಳನ್ನು ಮೆಟ್ಟಿನಿಂತು ಸಮಾಜ ಸೇವೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕಡೆಗಣನೆಗೆ ಒಳಗಾಗಿದ್ದ ಆಶಾ ಕಾರ್ಯಕರ್ತೆಯರನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡಿದ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಸಹಕಾರವನ್ನು ಸರ್ಕಾರ ಅಭಿನಂದಿಸುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.