ETV Bharat / state

ಮಹಾರಾಷ್ಟ್ರ ಕನ್ನಡಿಗರಿಗೆ ಕಿರುಕುಳ ನೀಡಿದರೆ ಕೇಂದ್ರದ ಗಮನಕ್ಕೆ ತರುತ್ತೇವೆ: ಡಿಸಿಎಂ ಸವದಿ - Maharastra CM Uddhav Thackeray

ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರ ಮೇಲೆ ಏನಾದರೂ ಮಹಾರಾಷ್ಟ್ರ ಸರ್ಕಾರ ಸಮಸ್ಯೆ ಮಾಡಿದರೆ ಈ ಬಗ್ಗೆ ತಕ್ಷಣವೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

Laxman Savadi
ಲಕ್ಷ್ಮಣ್ ಸವದಿ
author img

By

Published : Mar 13, 2021, 12:50 PM IST

ಅಥಣಿ: ಶಿವಸೇನೆ ಕಾರ್ಯಕರ್ತರು ಗಡಿ ವಿಚಾರವಾಗಿ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದು, ಕೊಲ್ಲಾಪುರದಲ್ಲಿ ಕರ್ನಾಟಕ ಬಸ್​ಗಳ ಮೇಲೆ ಕಪ್ಪು ಬಣ್ಣ ಬಳಿದಿರುವುದು ಹಾಗೂ ನಮ್ಮ ಸಾರಿಗೆ ವಾಹನದ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿರುವುದನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಖಂಡಿಸಿದ್ದಾರೆ.

ಡಿಸಿಎಂ ಲಕ್ಷ್ಮಣ್ ಸವದಿ

ಈ ಬಗ್ಗೆ ಅಥಣಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಸಚಿವರು, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಸರ್ಕಾರ ನಡೆಸಲು ವಿಫಲವಾಗಿರುವುದರಿಂದ ಜನಸಾಮಾನ್ಯರ ಗಮನ ಬೇರೆ ಕಡೆ ಹರಿಸಲು ಕರ್ನಾಟಕದೊಂದಿಗೆ ಗಡಿಕ್ಯಾತೆ ತೆಗೆಯುತ್ತಿದ್ದಾರೆ ಎಂದು ಮಹಾ ಸಿಎಂ ವಿರುದ್ಧ ಸವದಿ ಹರಿಹಾಯ್ದರು.

ಅಲ್ಲದೇ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಅಲ್ಲಿನ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಇದರಿಂದಾಗಿ ಮಹಾರಾಷ್ಟ್ರದ ಗಡಿಗೆ ಹೊಂದಿರುವ ಕರ್ನಾಟಕದ ಜಿಲ್ಲೆಗಳಲ್ಲೂ ಪರಿಣಾಮವಾಗಬಹುದು.
ಮಹಾರಾಷ್ಟ್ರ ಸರ್ಕಾರ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರಿಗೆ ಏನಾದರೂ ಸಮಸ್ಯೆ ಮಾಡಿದರೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ಈ ವಿಚಾರವನ್ನು ತರಬೇಕಾಗುತ್ತದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.