ಅಥಣಿ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ವ್ಯೆದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೊಡನೆ ಕೊರೊನಾ ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಸಭೆ ನಡೆಸಿದರು.
ಸಿಬ್ಬಂದಿವರ್ಗ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಲು ಎಲ್ಲರನ್ನು ಶಿಫ್ಟ್ ವ್ಯವಸ್ಥೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸುವಂತೆ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನಲ್ಲಿ ಔಷಧ ಹಾಗೂ ಆಕ್ಸಿಜನ್ ಕೊರತೆಯಾದರೆ ಕೂಡಲೇ ನನ್ನ ಗಮನಕ್ಕೆ ತನ್ನಿ ಎಂದು ವೈದ್ಯಾಧಿಕಾರಿಗಳಿಗೆ ಡಿಸಿಎಂ ಸವದಿ ತಿಳಿಸಿದರು.