ETV Bharat / state

ಬೆಳಗಾವಿಯಲ್ಲಿ ಈವರೆಗೂ ಪ್ರವಾಹ ಬಂದಿಲ್ಲ: ಡಿಸಿಎಂ ಲಕ್ಷ್ಮಣ ಸವದಿ - Belagavi floods

ಬೆಳಗಾವಿಯಲ್ಲಿ ಇದುವರೆಗೂ ಪ್ರವಾಹ ಉಂಟಾಗಿರುವ ಬಗ್ಗೆ ಮಾಹಿತಿ ಬಂದಿಲ್ಲ. ಪ್ರಾಯಶಃ ಬಂದರೂ ಜಿಲ್ಲಾಡಳಿತ ಪ್ರವಾಹ ನಿಭಾಯಿಸಲು ಎಲ್ಲ ಕ್ರಮ ಕೈಗೊಂಡಿದೆ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

DCM Savadi Reaction
ಡಿಸಿಎಂ ಲಕ್ಷ್ಮಣ ಸವದಿ
author img

By

Published : Aug 18, 2020, 4:04 PM IST

ಬೆಳಗಾವಿ: ಜಿಲ್ಲೆಯ ಸಪ್ತನದಿಗಳ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುತ್ತಿದೆ. ಆದರೆ ಬೆಳಗಾವಿಯಲ್ಲಿ ಈವರೆಗೆ ಪ್ರವಾಹ ಬಂದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈವರೆಗೆ ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್​ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಯ ಒಳಹರಿವು 3 ಲಕ್ಷ ಆದ್ರೆ ಮಾತ್ರ ನದಿಪಾತ್ರದಲ್ಲಿ ಪ್ರವಾಹದ ಆತಂಕ ಇರುತ್ತದೆ. ಪ್ರತಿವರ್ಷ ಬಂದಂತೆ ಪ್ರಸ್ತುತ ವರ್ಷವೂ ನೀರು ಬರುತ್ತಿದೆಯಷ್ಟೆ. ಪ್ರವಾಹ ಬರಬಹುದು ಎಂಬ ಸಂಶಯದಿಂದ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಕ್ಕೆ ಮಾಹಿತಿ ನೀಡಿದ್ದೇವೆ. ಜಿಲ್ಲಾಡಳಿತ ಪ್ರವಾಹ ನಿಭಾಯಿಸಲು ಎಲ್ಲ ಕ್ರಮ ಕೈಗೊಂಡಿದೆ. ನದಿಪಾತ್ರದಲ್ಲಿ ಡಂಗೂರ ಹೊಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಜನರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಜಮೀನಿಗೆ ನೀರು ನುಗ್ಗಿರುವ ಬಗ್ಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಹಾನಿ ಎಷ್ಟಾಗುತ್ತೋ ಅಷ್ಟು ಪರಿಹಾರ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

ಬೆಂಗಳೂರು ಗಲಭೆಗೆ ಕಾಂಗ್ರೆಸ್ ಕಾರಣ:

ಕಾಂಗ್ರೆಸಿಗರಿಂದಲೇ ಬೆಂಗಳೂರಿನ ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಗಲಭೆಯಾಗಿದೆ. ಗಲಭೆ ಹುಟ್ಟು ಹಾಕಿದ್ದೇ ಕಾಂಗ್ರೆಸ್ ಕಾರ್ಯಕರ್ತರು. ಇದನ್ನು‌ ಮುಚ್ಚಿ ಹಾಕಲು ಆಡಳಿತ ಪಕ್ಷದ ಮೇಲೆ ಕೈ ಮುಖಂಡರು ಆರೋಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಮೇಲೆ ಆರೋಪ ಹೊರೆಸಲು ಕಾಂಗ್ರೆಸ್ ಹುನ್ನಾರ ಮಾಡುತ್ತಿದೆ. ಗೃಹ ಸಚಿವರು, ಪೊಲೀಸರು ಉತ್ತಮ ಕೆಲಸ ಮಾಡುತ್ತಿರುವುದರಿಂದ ಗಲಭೆ ಹತೋಟಿಗೆ ಬಂದಿದೆ.

ಡಿಸಿಎಂ ಲಕ್ಷ್ಮಣ ಸವದಿ

ಇಂಥ ಘಟನೆ ಪುಮರಾವರ್ತನೆ ಆಗದಂತೆ ಕಿಡಿಗೇಡಿಗಳಿಗೆ ತಕ್ಕ ಶಿಕ್ಷೆ ಆಗಲಿದೆ‌. ಆರೋಪಿತರಿಂದಲೇ ಆಸ್ತಿ ಮುಟ್ಟುಗೋಲು ಹಾಕುವ ಸಂಬಂಧ ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆದಿದೆ. ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆ ನಿಷೇಧ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದರು.

ರಮೇಶ್ ದೆಹಲಿ ಭೇಟಿ ತಪ್ಪಿಲ್ಲ:

ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಭೇಟಿ ಆಗುವುದರಲ್ಲಿ ತಪ್ಪೇನಿಲ್ಲ. ನಮ್ಮ ಪಕ್ಷದವರು ಯಾರೂ ಬೇಕಾದರೂ ಭೇಟಿ ಆಗಬಹುದು. ರಾಜ್ಯದ ಅಭಿವೃದ್ಧಿ ಹಾಗೂ ಇಲಾಖೆ ಸಂಬಂಧ ಚರ್ಚಿಸಲು ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿದ್ದರಷ್ಟೇ‌. ಸಂಪುಟ ವಿಸ್ತರಣೆ ಪರಮಾಧಿಕಾರ ಸಿಎಂ ಯಡಿಯೂರಪ್ಪನವರಿಗಿದೆ. ಅವರು ಯಾವಾಗ ಬೇಕಾದರೂ ಸಂಪುಟ ವಿಸ್ತರಣೆ ತೀರ್ಮಾನ ತೆಗೆದುಕೊಳ್ಳಬಹುದು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.