ಚಿಕ್ಕೋಡಿ: ಕಳೆದ ಮೂರು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಉಪನ್ಯಾಸಕಿವೋರ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.
ಸಂಕೇಶ್ವರ ಪಟ್ಟಣದ ನಿವಾಸಿ ಶೃತಿ ವಿಜಯ ಸಮಕ್ಕನ್ನವರ(28) ಮೃತ ಉಪನ್ಯಾಸಕಿ. ಇವರು ಸಂಕೇಶ್ವರದ ಅನ್ನಪೂರ್ಣ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ಉಪನ್ಯಾಸಕಿಯಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದ್ವಿಚಕ್ರವಾಹನ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೆಎಲ್ಇ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.