ಬೆಳಗಾವಿ: ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಶ್ರೀದೇವಿ ಹುಕ್ಕೇರಿ (37) ಕೊರೊನಾಗೆ ಬಲಿಯಾಗಿದ್ದಾರೆ.
ಮೃತ ಶಿಕ್ಷಕಿ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದರು. ಈ ವೇಳೆ ಕೊರೊನಾ ತಗುಲಿ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.
ಈವರೆಗೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿರುವ 12 ಮಂದಿ ಶಿಕ್ಷಕರು ಕೋವಿಡ್ಗೆ ಬಲಿಯಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಓದಿ:ಮಕ್ಕಳನ್ನೇ ಕಾಡುತ್ತಿದೆ ಕೊರೊನಾ: ಒಂದೇ ಜಿಲ್ಲೆಯ 341 ಮಕ್ಕಳಿಗೆ ಸೋಂಕು