ETV Bharat / state

ಪೌರಸೇವಾ ನೌಕರರೆಂದು ಪರಿಗಣಿಸಲು ಆಗ್ರಹ: ಸ್ಥಳೀಯ ಸಂಸ್ಥೆ ಕಾರ್ಮಿಕರ ಪ್ರತಿಭಟನೆ - Demanding to made civilian employees

ಪೌರ ಕಾರ್ಮಿಕರನ್ನು ಪೌರಸೇವಾ ನೌಕರರೆಂದು‌ ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ನಗರ ಸ್ಥಳೀಯ ಸಂಸ್ಥೆಗಳ ರಾಜ್ಯ ನೌಕರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಪೌರಸೇವಾ ನೌಕರರೆಂದು ಪರಿಗಣಿಸಲು ಆಗ್ರಹ
ಪೌರಸೇವಾ ನೌಕರರೆಂದು ಪರಿಗಣಿಸಲು ಆಗ್ರಹ
author img

By

Published : Jun 26, 2020, 4:29 PM IST

Updated : Jun 26, 2020, 9:35 PM IST

ಬೆಳಗಾವಿ: ಹೊಸದಾಗಿ ಮೇಲ್ದರ್ಜೆಗೇರಿಸಲಾದ ಪಟ್ಟಣ ಪಂಚಾಯಿತಿ, ಪುರಸಭೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರನ್ನು ಪೌರಸೇವಾ ನೌಕರರೆಂದು‌ ಪರಿಗಣಿಸಿ ಸರ್ಕಾರ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ನಗರ ಸ್ಥಳೀಯ ಸಂಸ್ಥೆಗಳ ರಾಜ್ಯ ನೌಕರರ ಸಂಘದಿಂದ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪೌರಸೇವಾ ನೌಕರರೆಂದು ಪರಿಗಣಿಸಲು ಆಗ್ರಹ

ಜಿಲ್ಲಾಧಿಕಾರಿಗೆ ಮನವಿ ಮಾಡಿದ ಪೌರ ಕಾರ್ಮಿಕರು, ಜಿಲ್ಲೆಯಲ್ಲಿ ಹೊಸದಾಗಿ ಮೇಲ್ದರ್ಜೆಗೇರಿಸಲಾದ ಸ್ಥಳೀಯ ಸಂಸ್ಥೆಗಳಲ್ಲಿ ಹಗಲಿರುಳು ಸೇವೆ ಸಲ್ಲಿಸುತ್ತಿರುವ ಹಳೆಯ ಕಾರ್ಮಿಕರನ್ನು ರಾಜ್ಯ‌ ಸರ್ಕಾರ‌ ಮುಂದುವರೆಸಬೇಕು ಎಂದು ಮನವಿ ಮಾಡಿದರು. ಈ ಮಧ್ಯೆ ಹಲವು ವರ್ಷಗಳಿಂದ ನಮಗೆ ಸರ್ಕಾರದಿಂದ ಸಿಗಬೇಕಾದ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳಿಂದ ನಾವು ವಂಚಿತರಾಗಿದ್ದೇವೆ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.

ಕೋವೀಡ್ -19 ನಂತಹ ಸಂದರ್ಭದಲ್ಲಿಯೂ ಜೀವದ ಹಂಗು ತೊರೆದು ಹಗಲಿರುಳು ಜನ ಸೇವೆ ಸಲ್ಲಿಸಲಾಗಿದೆ. ಆದ್ರೆ, ಸರ್ಕಾರ ಮಾತ್ರ ನಮ್ಮ ಮೇಲೆ ಕರುಣೆ ತೋರುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ನಮ್ಮ ಸೇವೆಯ ಆಧಾರದ ಮೇಲೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಎಲ್ಲ ಪೌರ ಕಾರ್ಮಿಕರನ್ನು ಪೌರಸೇವಾ ನೌಕರರು ಎಂದು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Last Updated : Jun 26, 2020, 9:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.