ETV Bharat / state

ಮೀಸಲಾತಿ ನೀಡಲು ನಿರ್ಣಯ ಕೈಗೊಳ್ಳದಿದ್ದರೆ ವಿಧಾನಸೌಧ ಮುತ್ತಿಗೆ: ಕೂಡಲಸಂಗಮ ಶ್ರೀ

ಸರ್ಕಾರ ಯಾವಾಗ ಬಜೆಟ್ ಅಧಿವೇಶನದ ಶುರು ಮಾಡುತ್ತೋ ಆ ಸಂದರ್ಭದಲ್ಲಿ ಕ್ಲೋಸಿಂಗ್ ಡೇಟ್ ಅನೌನ್ಸ್​ ಮಾಡಬೇಕೆಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಬಜೆಟ್ ಅಧಿವೇಶನ ಇದ್ದಾಗ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು..

Lingayat panchamasali community meeting
ಲಿಂಗಾಯತ ಪಂಚಮಸಾಲಿ ಸಮುದಾಯದ ಸಭೆ
author img

By

Published : Jan 2, 2021, 4:19 PM IST

Updated : Jan 2, 2021, 4:25 PM IST

ಬೆಳಗಾವಿ : ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಜ.14ರಂದು ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ನಗರದ ಗಾಂಧಿ ಸಭಾಂಗಣದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕುರಿತಂತೆ ಜಿಲ್ಲೆಯ ಲಿಂಗಾಯತ ಸಮುದಾಯದ ಮುಖಂಡರೊಂದಿಗೆ ಪಾದಯಾತ್ರೆ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಬಳಿಕ ಮಾತನಾಡಿದ ಅವರು, ಲಿಂಗಾಯತ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಜನವರಿ 14ರಿಂದ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಅಂದಾಜು 700 ಕಿ.ಮೀವರೆಗೆ ಪಾದಯಾತ್ರೆ‌ ನಡೆಸಲಿದ್ದೇವೆ.

ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರ ಸಭೆ

ಸರ್ಕಾರ ಯಾವಾಗ ಬಜೆಟ್ ಅಧಿವೇಶನದ ಶುರು ಮಾಡುತ್ತೋ ಆ ಸಂದರ್ಭದಲ್ಲಿ ಕ್ಲೋಸಿಂಗ್ ಡೇಟ್ ಅನೌನ್ಸ್​ ಮಾಡಬೇಕೆಂದು ನಿರ್ಣಯ ತೆಗೆದುಕೊಳ್ಳಲಾಗಿದೆ. ಬಜೆಟ್ ಅಧಿವೇಶನ ಇದ್ದಾಗ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಓದಿ: ಪಂಚಮಸಾಲಿ ಸಮುದಾಯಕ್ಕೆ ಯಡಿಯೂರಪ್ಪ ಅವಧಿಯಲ್ಲೇ ಮೀಸಲಾತಿ ನೀಡಿ ; ಬಸವ ಜಯ ಮೃತ್ಯುಂಜಯ ಸ್ವಾಮೀಜಿ

Last Updated : Jan 2, 2021, 4:25 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.