ETV Bharat / state

ಕೋವಿಡ್-19 ತಡೆಗೆ ಟೋಲ್ ಪ್ಲಾಜಾಗಳಲ್ಲಿ ಆರೋಗ್ಯ ತಪಾಸಣೆ ತಂಡ: ಡಾ. ಎಸ್. ಬಿ. ಬೊಮ್ಮನಹಳ್ಳಿ

ವಿದೇಶದಿಂದ ಆಗಮಿಸುವ ಜನರ ಮೇಲೆ ಈಗಾಗಲೇ ಕೇಂದ್ರೀಕೃತ ವ್ಯವಸ್ಥೆ ಮೂಲಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಡಾ. ಎಸ್. ಬಿ. ಬೊಮ್ಮನಹಳ್ಳಿ ತಿಳಿಸಿದ್ದಾರೆ.

author img

By

Published : Mar 18, 2020, 5:01 AM IST

Dr. S. B. Bommanahalli
ಡಾ. ಎಸ್. ಬಿ. ಬೊಮ್ಮನಹಳ್ಳಿ

ಬೆಳಗಾವಿ: ಕೋವಿಡ್-19 ವೈರಾಣು ತಡೆಗಟ್ಟುವ ಉದ್ದೇಶದಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲೆಯ ಟೋಲ್ ಪ್ಲಾಜಾಗಳಲ್ಲಿ ಆರೋಗ್ಯ ತಪಾಸಣೆ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಹೇಳಿದ್ದಾರೆ.

ಡಾ. ಎಸ್. ಬಿ. ಬೊಮ್ಮನಹಳ್ಳಿ

ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಇಂದು ಸಂಜೆ ನಡೆದ ವಿವಿಧ ಧಾರ್ಮಿಕ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,

ಗೋವಾ ರಾಜ್ಯವನ್ನು ಸಂಪರ್ಕಿಸುವ ಸ್ಥಳಗಳಲ್ಲಿ ನಿಗಾವಹಿಸಲಾಗಿದೆ. ವಿದೇಶದಿಂದ ಆಗಮಿಸುವ ಜನರ ಮೇಲೆ ಈಗಾಗಲೇ ಕೇಂದ್ರೀಕೃತ ವ್ಯವಸ್ಥೆ ಮೂಲಕ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಅದಾಗ್ಯೂ ಅಂತಹ ವ್ಯಕ್ತಿಗಳು ಜಿಲ್ಲೆಗೆ ಬಂದಾಗ ಸ್ವಯಂಪ್ರೇರಣೆಯಿಂದ ಮಾಹಿತಿ ನೀಡಬೇಕು.ಇದರಿಂದ ವೈರಾಣು ಹರಡುವುದನ್ನು ತಡೆಗಟ್ಟಲು ಸುಲಭವಾಗಲಿದೆ ಎಂದರು.

ಜನದಟ್ಟಣೆ ನಿರ್ಬಂಧಿಸಲು ಸರ್ಕಾರ ನೀಡಿರುವ ಆದೇಶದ ಮೇರೆಗೆ ಜಿಲ್ಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ನಿರ್ಬಂಧಿಸಲಾಗಿದೆ. ಆದ್ರೆ, ಸಾರ್ವಜನಿಕರ ಸ್ವಾತಂತ್ರ್ಯ ಧಾರ್ಮಿಕ ಆಚರಣೆಗೆ ನಿರ್ಬಂಧ ಮಾಡಿಲ್ಲ. ಕೊರೊನಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ ಅಷ್ಟೇ ಎಂದರು.

ಜಿಪಂ‌ ಸಿ. ಇ. ಓ. ಡಾ.ರಾಜೇಂದ್ರ ಕೆ.ವಿ ಮಾತನಾಡಿ, ಅನವಶ್ಯಕವಾಗಿ ಜನದಟ್ಟಣೆ ಉಂಟು ಮಾಡದೇ ಪರಸ್ಪರ ಅಂತರ ಕಾಯ್ದುಕೊಳ್ಳುವ ಮೂಲಕ‌ ಕೊರೊನಾ ವೈರಾಣುವಿನಿಂದ ತಮ್ಮನ್ನು ರಕ್ಷಿಸಿಕೊಳ್ಳಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.