ETV Bharat / state

ಧಾರವಾಡ ಎಸ್ಪಿ ಪಿ.ಕೃಷ್ಣಕಾಂತ ವರ್ಗಾವಣೆ : ಬೆಳಗಾವಿಗೆ ಸಂಜೀವ್ ಪಾಟೀಲ ನೇಮಕ

ಧಾರವಾಡದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್ ವರ್ಗಾವಣೆಯಾಗಿದೆ. ಅವರ ಸ್ಥಾನಕ್ಕೆ ಲೋಕೇಶ್ ಜಗಲಸರ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವರ್ಗವಾಗಿದ್ದು, ಸಂಜೀವ್ ಪಾಟೀಲ ಅವರ ಸ್ಥಾನಕ್ಕೆ ಬರಲಿದ್ದಾರೆ..

Dharwad SP KrishnaKantha was Transfered
ಐಪಿಎಸ್ ಅಧಿಕಾರಿಗಳ ವರ್ಗಾವಣೆ
author img

By

Published : Jun 27, 2022, 4:42 PM IST

ಧಾರವಾಡ : 16 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಲ್ಲಿ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಕೂಡ ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಲೋಕೇಶ್ ಜಗಲಸರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಪಿ.ಕೃಷ್ಣಕಾಂತ್‌ ಅವರನ್ನು ಬೆಂಗಳೂರಿನ ಸೌತ್ ಡಿವಿಜನ್‌ಗೆ ಡೆಪ್ಯುಟಿ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಇವರಿಂದ ತೆರವಾದ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಥಾನಕ್ಕೆ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ, 2015ನೇ ಬ್ಯಾಚಿನ ಐಪಿಎಸ್ ಅಧಿಕಾರಿ ಲೋಕೇಶ್ ಜಗಲಸರ್ ಅವರನ್ನು ನೇಮಕ ಮಾಡಲಾಗಿದೆ.

ಸಂಜೀವ್ ಪಾಟೀಲ ಬೆಳಗಾವಿ ನೂತನ ಎಸ್ಪಿ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವರ್ಗ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2012ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸಂಜೀವ್ ಪಾಟೀಲ ಬೆಳಗಾವಿ ನೂತನ ಎಸ್ಪಿ ಆಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ‌. ಕಳೆದ ಮೂರು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿ ಆಗಿ ಲಕ್ಷ್ಮಣ ನಿಂಬರಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ: 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.